ರಾಷ್ಟ್ರ ಸುದ್ದಿ

ಮುಂಬೈ ಆಸ್ಪತ್ರೆ ಅಗ್ನಿ ದುರಂತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನ ಇಎಸ್ ಐಸಿ ಆಸ್ಪತ್ರೆಯಲ್ಲಿನ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಮುಂಬೈ ನಗರದ ಹೊರವಲಯದ ಅಂಧೇರಿಯ ಮಾರೊಲ್ ನಲ್ಲಿರುವ  ರಾಜ್ಯ ನೌಕರರ ವಿಮಾ ನಿಗಮ- ಇಎಸ್ ಐಸಿ ಕಾಮ್ ಗರ್  ಆಸ್ಪತ್ರೆಯಲ್ಲಿ ನಿನ್ನೆ ಭೀಕರ ಅಗ್ನಿ ಆಕಸ್ಮಿಕ ಬೆಂಕಿ ಉಂಟಾಗಿತ್ತು. ಘಟನೆಯಲ್ಲಿ ನಿನ್ನೆ 6 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಇದೀಗ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊದಲು ನಾಲ್ಕನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಇತರ ಅಂತಸ್ತುಗಳಿಗೂ ವ್ಯಾಪಿಸಿದೆ. ಇನ್ನು ಈ ವರೆಗೂ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳೂ ಸೇರಿದಂತೆ ಸುಮಾರು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, 8ಕ್ಕೂ ಅಧಿಕ ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment