ರಾಜಕೀಯ

ಮುಖ್ಯಮಂತ್ರಿಯಾಗಿ ಮೋದಿ ಮಾಡಿದ್ದಂತೆ ಅಮಾಯಕ ಜನರನ್ನು ಹತ್ಯೆ ಮಾಡಲ್ಲ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ್ದಂತೆ ನಾನು ಮುಗ್ದ ಜನರನ್ನು ಹತ್ಯೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 128  ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ ಮೋದಿಯಿಂದ ನಾನು ಕಲಿಯಬೇಕಾದ ಅಗತ್ಯವೇನಿಲ್ಲ, ಮುಖ್ಯಮಂತ್ರಿಯಾಗಿ ಮುಗ್ದ ಜನರ ಬದುಕಿನೊಂದಿಗೆ ನಾನು ಚೆಲ್ಲಾಟವಾಡುವುದಿಲ್ಲ ಎಂದರು.

ಐಟಿ ದಾಳಿಗಳ ಬಗ್ಗೆ ನನ್ನಗೆ ಭಯವಿಲ್ಲ, ದೇವೇಗೌಡರು ಊಟಕ್ಕಾಗಿ ಯಾರ ಮನೆಗೂ ಹೋದರೂ ಅಲ್ಲಿಯೂ ಐಟಿ ದಾಳಿ ಮಾಡಲಾಗುತ್ತಿದೆ. ಇದು ಎಂತಹ ಸರ್ಕಾರ ಎಂದು ಟೀಕಿಸಿದರು.ಮಾರ್ಚ್  28 ರಂದು  ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ 1. 66 ಕೋಟಿ ನಗದನ್ನು ವಶಪಡಿಸಿಕೊಂಡಿತ್ತು. ಬಿಜೆಪಿ ಜೊತೆಗೆ ಸರ್ಕಾರ ರಚಿಸಲು ಕುಮಾರಸ್ವಾಮಿ ಒಪ್ಪದ ಕಾರಣ ಬಿಜೆಪಿ ಬೇಕೆಂತಲೆ ದಾಳಿ ನಡೆಸುತ್ತಿದೆ ಎಂದು ದೇವೇಗೌಡರು ಆರೋಪಿಸಿದ್ದರು.ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ 23 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮೇ 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

About the author

ಕನ್ನಡ ಟುಡೆ

Leave a Comment