ರಾಜಕೀಯ

ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಕಾಂಗ್ರೆಸ್ ಬೆಂಬಲಿಸದಿದ್ದರೆ ಬಿಜೆಪಿ ಸರ್ಕಾರ ರಚನೆ: ಸದಾನಂದಗೌಡ

ಬೆಂಗಳೂರು:  ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಬೆಂಬಲಿಸದಿದ್ದರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಅಚ್ಚರಿಯ ರೀತಿಯ ಹೇಳಿಕೆ ನೀಡಿದ್ದಾರೆ.ಬೆಂಗಳೂರು ಉತ್ತರ  ಲೋಕಸಭಾ ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರ ಸಭೆಯ ನಂತರ ಮಾತನಾಡಿದ ಸದಾನಂದಗೌಡ, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿಲ್ಲ. ಆದರೆ, ಅವರ ಶಾಸಕರೇ ಅವರೊಂದಿಗೆ ಇಲ್ಲ.  ಒಂದು ವೇಳೆ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬೆಂಬಲಿಸಿದಿದ್ದರೆ ನಂತರ ಬಿಜೆಪಿ ಸರ್ಕಾರ ರಚಿಸಲಿದೆ ಎಂದರು.ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿ ಇಲ್ಲ. ಸಮ್ಮಿಶ್ರ ಸರ್ಕಾರದ 25 ರಿಂದ 30 ಶಾಸಕರು ನಾಪತ್ತೆಯಾಗಿದ್ದಾರೆ ಎಂದು ಆರ್. ಅಶೋಕ್ ಹೇಳಿದರು.ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಗೆ ಅತ್ಯಂತ ಸವಾಲಿನದಾಗಿದೆ. ದೇವೇಗೌಡ ಅಥವಾ ಯಾರೇ ಸ್ಪರ್ಧಿಸಿದ್ದರೂ  ಬಿಜೆಪಿ ಪಕ್ಷದ ಕಾರ್ಯಕರ್ತರು ಲಘುವಾಗಿ ಪರಿಗಣಿಸಬಾರದು ಎಂದು ಸಭೆಯಲ್ಲಿ  ಸಲಹೆ ನೀಡಲಾಯಿತು.ಮಲ್ಲೇಶ್ವರಂನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ಸದಾನಂದಗೌಡ, ದೇವೇಗೌಡರು ಉತ್ತರ ಲೋಕಸಭಾ ಕ್ಷೇತ್ರ ಗೆದ್ದರೆ ಇಡೀ ಬೆಂಗಳೂರಿನಲ್ಲಿ ಜೆಡಿಎಸ್  ಪ್ರಾಬಲ್ಯ ಸಾಧಿಸಿದಂತಾಗುತ್ತದೆ. ಹಾಗಾಗೀ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

About the author

ಕನ್ನಡ ಟುಡೆ

Leave a Comment