ರಾಜ್ಯ ಸುದ್ದಿ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಅಪಾಯದಿಂದ ಪಾರು

ಮಂಡ್ಯ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಿನ್ನೆ ಶ್ರೀರಂಗಪಟ್ಟಣ ತಾಲ್ಲೂಕಿನ ಪೀಹಳ್ಳಿ ಗ್ರಾಮದಲ್ಲಿ ನಡೆಯಿತು. ನಿನ್ನೆ ಮಂಡ್ಯದ ವಿವಿಧ ತಾಲ್ಲೂಕುಗಳಲ್ಲಿ ತಮ್ಮ ಪುತ್ರ ಮೈತ್ರಿಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮುಗಿಸಿ ರಾತ್ರಿ ಕೆಆರ್ ಎಸ್ ನ ಖಾಸಗಿ ಹೊಟೇಲ್ ನಲ್ಲಿ ತಂಗಲು ಸಿಎಂ ತೆರಳುತ್ತಿದ್ದ ವೇಳೆ ಅವರ ರೇಂಜ್ ರೋವರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಕಾರಿನ ಎಂಜಿನ್ ಬಿಸಿಯಾಗಿ ಹೊಗೆ ಕಾಣಿಸಿಕೊಂಡು ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಯವರನ್ನು ಕೆಳಗಿಳಿಸಿ ಬೇರೆ ಕಾರಿನಲ್ಲಿ ಕಳುಹಿಸಿ ನಂತರ ಸ್ಥಳೀಯರ ಜೊತೆ ಸೇರಿ ಬೆಂಕಿ ನಂದಿಸಿದ್ದಾರೆ. ಕಾರಿನ ಎಂಜಿನ್ ನಲ್ಲಿ ಆಯಿಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

About the author

ಕನ್ನಡ ಟುಡೆ

Leave a Comment