ರಾಜಕೀಯ

ಮುಸ್ಲಿಮರಿಗೆ ನಮ್ಮ ಮೇಲೆ ನಂಬಿಕೆ ಇಲ್ಲ, ಹೀಗಾಗಿ ಟಿಕೆಟ್ ನೀಡಿಲ್ಲ: ಕೆ.ಎಸ್ ಈಶ್ವರಪ್ಪ

ಕೊಪ್ಪಳ: ಕಾಂಗ್ರೆಸ್ ನಿಮ್ಮನ್ನು ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ, ಕಾಂಗ್ರೆಸ್ ಪಕ್ಷ ನಿಮಗೆ ಯಾವತ್ತೂ ಟಿಕೆಟ್ ನೀಡುವುದಿಲ್ಲ ಎಂದು ಮಾಡಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ ಕುರುಬ ಮತ್ತು ಅಲ್ಪಸಂಖ್ಯಾತ ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ , ನಾವು ಮುಸ್ಲಿಮರಿಗೆ ಟಿಕೆಟ್ ನೀಡುವುದಿಲ್ಲ, ಏಕೆಂದರ್ ಅವರಿಗೆ ನಮ್ಮ ಮೇಲೆ ನಂಬಿಕೆ ಇಲ್ಲ, ನಮ್ಮನ್ನು ನಂಬಿ, ಆಗ ನಾವು ಟಿಕೆಟ್ ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನೂ ಇದೇ ವೇಳೆ ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ದೇವೇಗೌಡರೇ ಬರೆದಿಟ್ಟುಕೊಳ್ಳಿ ನೀವು ರ್ ಬಾರಿ ಒಂದು ಸೀಟು ಗೆಲ್ಲುವುದಿಲ್ಲ ಎಂದು ಸವಾಲು ಹಾಕಿದ್ದಾರೆ, ಆದಷ್ಟು ಶೀಘ್ರವೇ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ನೆಗೆದು ಬೀಳುತ್ತದೆ ಎಂದು ಟೀಕಿಸಿದ್ದಾರೆ.

About the author

ಕನ್ನಡ ಟುಡೆ

Leave a Comment