ರಾಷ್ಟ್ರ ಸುದ್ದಿ

ಮೂರನೇ ಬಾರಿ ಇ.ಡಿ ಮುಂದೆ ವಿಚಾರಣೆಗೆ ಹಾಜರಾದ ರಾಬರ್ಟ್ ವಾದ್ರಾ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ ರಾಬರ್ಟ್ ವಾದ್ರಾ ಶನಿವಾರ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು. ಕೇಂದ್ರ ದೆಹಲಿಯಲ್ಲಿ ಜಮ್ನಗರ್ ಹೌಸ್ ನಲ್ಲಿರುವ ಜಾರಿ ನಿರ್ದೇಶನಾಲಯದ ಮುಂದೆ ಇಂದು ಬೆಳಗ್ಗೆ 10.45ರ ಸುಮಾರಿಗೆ ತಮ್ಮ ಖಾಸಗಿ ವಾಹನದಲ್ಲಿ ಬಂದರು. ವಿದೇಶದಲ್ಲಿ ಆಸ್ತಿ ಮತ್ತು ಮನೆ ಖರೀದಿ ಮಾಡುವಾಗ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಕೇಸಿಗೆ ಸಂಬಂಧಪಟ್ಟಂತೆ ವಾದ್ರಾ ಅವರು ಇನ್ನಷ್ಟು ಬಾರಿ ವಿಚಾರಣೆಗೆ ಹಾಜರಾಗಬೇಕಾಗಿ ಬರಬಹುದು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಫೆಬ್ರವರಿ 6 ಮತ್ತು 7ರಂದು ಎರಡು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ವಾದ್ರಾ ಅವರು ನೀಡಿದ ಹೇಳಿಕೆಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50ರಡಿ ದಾಖಲಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮೂಲಗಳು ತಿಳಿಸಿವೆ. ಇನ್ನೊಂದು ಅಕ್ರಮ ಹಣ ವರ್ಗಾವಣೆ ಕೇಸಿನ ವಿಚಾರಣೆಗೆ ಸಂಬಂಧಪಟ್ಟಂತೆ ಇದೇ 12ರಂದು ಜೈಪುರದಲ್ಲಿ ಜಾರಿ ನಿರ್ದೇಶನಾಲಯ ಮುಂದೆ ವಾದ್ರಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

About the author

ಕನ್ನಡ ಟುಡೆ

Leave a Comment