ರಾಷ್ಟ್ರ ಸುದ್ದಿ

ಮೇಲ್ವರ್ಗದ ಬಡಜನರಿಗೆ 10% ಮೀಸಲಾತಿ: ಕೇಂದ್ರದ ಅಸ್ತು

ನವದೆಹಲಿ: ಆರ್ಥಿಕ ದುರ್ಬಲ ಮೇಲ್ವರ್ಗದ ಜನರಿಗೆ (ಜನರಲ್​ ಕೆಟಗೆರಿ) ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಸಂಬಂಧ ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ನಾಳೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದೆ ಎಂದು ತಿಳಿದು ಬಂದಿದೆ. ಇದರಿಂದ ಪ್ರಸ್ತುತ ಇರುವ ಶೇ. 50 ಮೀಸಲಾತಿ ಪ್ರಮಾಣ ಶೇ. 60 ಕ್ಕೆ ಏರಿಕೆಯಾಗಲಿದೆ. ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಆದಾಯವುಳ್ಳ ಜನರಲ್​ ಕೆಟಗೆರಿಯ ಬಡ ಜನರಿಗೆ ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್​ ವಕ್ತಾರ ಅಭಿಷೇಕ್​ ಸಿಂಘ್ವಿ ತೀಕ್ಷಣವಾಗಿ ಟೀಕಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದು 4 ವರ್ಷ 8 ತಿಂಗಳ ನಂತರ ಮೀಸಲಾತಿಯಲ್ಲಿ ಬದಲಾವಣೆ ತಂದಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ  ಒದಗಿಸುವ ಮಸೂದೆ ಲೋಕಸಭೆಯಲ್ಲಿಂದು ಮಂಡನೆಯಾಯಿತು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಥಾವರ್ ಚಂದ್ ಗೆಹ್ಲೋಟ್  ಈ ಮಸೂದೆಯನ್ನು ಮಂಡಿಸಿದರು. ಸಮಾಜವಾದಿ ಪಕ್ಷದ ತೀವ್ರ ಪ್ರತಿಭಟನೆಯ ನಡುವೆಯೂ ಥಾವರ್ ಚಂದ್ ಗ್ಲೆಹೋಟ್ ಈ ಮಸೂದೆಯನ್ನು ಮಂಡಿಸಿದರು. ಮಸೂದೆ ಮೇಲೆ ಈಗ ಚರ್ಚೆ ಆರಂಭವಾಗಿದೆ. 2019ರ ಲೋಕಸಭಾ ಚುನಾವಣೆಗೆ ಕೇವಲ 100 ದಿನ  ಬಾಕಿ ಇರುವಂತೆಯೇ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ, 10 ರಷ್ಟು ಮೀಸಲಾತಿ ಒದಗಿಸುವ ಮಸೂದಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ  ಅನುಮೋದನೆ ನೀಡಲಾಗಿತ್ತು.

About the author

ಕನ್ನಡ ಟುಡೆ

Leave a Comment