ರಾಷ್ಟ್ರ ಸುದ್ದಿ

ಬಿಜೆಪಿ-ಶಿವಸೇನೆ ಮೈತ್ರಿ ಆದರೆ ಸಿಎಂ ಸ್ಥಾನದ ಕುರಿತು ಭಿನ್ನಾಭಿಪ್ರಾಯ ಖಾತ್ರಿ

ಮುಂಬೈ: ಬಿಜೆಪಿ-ಶಿವಸೇನೆ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಸ್ಥಾನ ಹಂಚಿಕೆಯನ್ನೂ ಘೋಷಿಸಿವೆ. ಆದರೆ ಒಂದು ವಿಷಯದಲ್ಲಿ ಮಾತ್ರ ಭಿನ್ನಾಭಿಪ್ರಾಯ ಮುಂದುವರೆಯಲಿದೆ.
2019 ರ ಲೋಕಸಭಾ ಚುನಾವಣೆ ನಂತರ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಮತ್ತೆ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಷಯದ ಬಗ್ಗೆ ಬಿಜೆಪಿ-ಶಿವಸೇನೆ ಭಿನ್ನಾಭಿಪ್ರಾಯ ಹೊಂದಿವೆ. ಶಿವಸೇನೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವುದು ಪಕ್ಷದ ಹೇಳಿಕೆಗಳಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ 25-23 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದರೆ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಸ್ಥಾನಗಳನ್ನು ಸಮನಾಗಿ ಹಂಚಿಕೊಂಡಿವೆ. 2014 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಆದರೆ ಈ ಬಾರಿ ಸ್ಥಾನಗಳು ಸಮವಾಗಿ ಹಂಚಿಕೆಯಾಗಿರುವುದರಿಂದ ಸಿಎಂ ಗಾದಿಗಾಗಿ ಶಿವಸೇನೆ-ಬಿಜೆಪಿ ನಡುವೆ ಭಿನ್ನಾಭಿಪ್ರಾಯ ಉಂಟಾಗಲಿದೆ.ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುತ್ತದೋ ಆ ಪಕ್ಷದವರು ಸಿಎಂ ಆಗಲಿದ್ದಾರೆ ಎಂಬ ಬಿಜೆಪಿ ಪ್ರಸ್ತಾವನೆಯನ್ನು ತಾವು ತಿರಸ್ಕರಿಸಿರುವುದಾಗಿ ಈಗಾಗಲೇ ಉದ್ಧವ್ ಠಾಕ್ರೆ ಪಕ್ಷದ ಕಾರ್ಯಕರ್ತರೆದುರು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment