ರಾಜ್ಯ ಸುದ್ದಿ

ಮೈಸೂರಿನ ಎನ್ಐಇ ಅಭಿವೃದ್ದಿಗೆ ಡಿಸಿಎಂ ಭೇಟಿಯಾದ ಇನ್ಫೋಸಿಸ್‌ ನಾರಾಯಣಮೂರ್ತಿ

ಬೆಂಗಳೂರು : ಇನ್ಫೋಸಿಸ್‌ನ ಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಅವರು ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿಯಾಗಿ ಮೈಸೂರಿನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಸಂಸ್ಥೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಚರ್ಚೆ ನಡೆಸಿದರು.

ಗುರುವಾರ ಸದಾಶಿವನಗರದ ಡಿಸಿಎಂ ಅವರ ಸರಕಾರಿ ನಿವಾಸಕ್ಕೆ ಭೇಟಿ ನೀಡಿದ ನಾರಾಯಣಮೂರ್ತಿ, ಕೆಲ ಕಾಲ ಮಾತುಕತೆ ನಡೆಸಿದರು. ಇದೇ ಸಂಸ್ಥೆಯಲ್ಲಿ ನಾರಾಯಣಮೂರ್ತಿ ಅವರು ವ್ಯಾಸಂಗ ಮಾಡಿದ್ದರು. ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಸಂಬಂಧ ಚರ್ಚೆ ನಡೆಯಿತು ಎಂದು ಭೇಟಿ ಬಳಿಕ ಡಿಸಿಎಂ ಪ್ರತಿಕ್ರಿಯಿಸಿದರು.

”ಸಂಸ್ಥೆಯಿಂದ ಇಂದಿನ ಪೀಳಿಗೆಯ ಯುವ ಜನರಿಗೆ ಹೆಚ್ಚಿನ ಅನುಕೂಲ ಆಗಲಿದೆ. ಈ ದೃಷ್ಟಿಯಿಂದ ಡಿಸಿಎಂ ಭೇಟಿ ಮಾಡಿರುವೆ. ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೇರಿಸಲು ಯೋಜನೆ ರೂಪಿಸಿದ್ದು, ಈ ಸಂಬಂಧ ಕೆಲ ವಿಷಯಗಳಲ್ಲಿ ಚರ್ಚೆ ನಡೆಸಲಾಯಿತು” ಎಂದು ನಾರಾಯಣಮೂರ್ತಿ ತಿಳಿಸಿದರು.

About the author

ಕನ್ನಡ ಟುಡೆ

Leave a Comment