ರಾಜ್ಯ ಸುದ್ದಿ

ಮೈಸೂರು ಪಾಲಿಕೆ ಮೇಯರ್​ ಸ್ಥಾನ ನಮಗೆ ಬೇಕು: ಸಿದ್ದರಾಮಯ್ಯ

ಮೈಸೂರು: ಮೈಸೂರು ಪಾಲಿಕೆ ಚುನಾವಣೆಯಲ್ಲಿ ನಾವು ಹೆಚ್ಚು ಸಂಖ್ಯೆಯಲ್ಲಿ ಗೆದ್ದಿದ್ದೇವೆ. ಹೀಗಾಗಿ ಮೇಯರ್​ ಸ್ಥಾನ ನಮಗೆ ಬೇಕು ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ಮೇಯರ್ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಪಿಎಂಸಿ ಅಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರ ನನಗೆ ಗೊತ್ತಿಲ್ಲ ಎಂದರು.

ಹಿಂದಿನಿಂದಲೂ ಜೆಡಿಎಸ್​​ನೊಂದಿಗೆ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದಿರುವುದರಿಂದ ಈಗ ಅವರ ಜತೆಯಲ್ಲಿ ಕೆಲಸ ಮಾಡಲು ಸ್ವಲ್ಪ ಇರಿಸು ಮುರಿಸಾಗುತ್ತಿದೆ ಎಂದು ಮಾಜಿ ಸಿಎಂ, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಬಿಜೆಪಿ ಅಸ್ಥಿರವಾಗುತ್ತಿದೆ ಎಂದು ಎಚ್ಚರಿಸಿದರು.

ಐದೂ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ. ಮಂಡ್ಯದ ಕಾಂಗ್ರೆಸ್ ನಾಯಕರು ಈಗಾಗಲೇ ವಿದೇಶಕ್ಕೆ ಹೋಗಿ ಬಂದಿದ್ದಾರೆ. ನಾನೂ ಈಗ ಮಂಡ್ಯಕ್ಕೆ ಹೋಗುತ್ತೇನೆ ಎಲ್ಲರ ಜತೆ ಮಾತಾಡುತ್ತೇನೆ. ನಮ್ಮ ಎದುರಾಳಿ ಬಿಜೆಪಿ ಆಗಿರುವುದರಿಂದ ಜತೆಯಾಗಿಯೇ ಕೆಲಸ ಮಾಡಬೇಕು ಎಂದು ಹೇಳಿದರು

About the author

ಕನ್ನಡ ಟುಡೆ

Leave a Comment