ರಾಜ್ಯ ಸುದ್ದಿ

ಮೈಸೂರು: ‘ಬದುಕಲು ಕಲಿಯಿರಿ’ ಖ್ಯಾತಿಯ ಸ್ವಾಮಿ ಜಗದಾತ್ಮಾನಂದಜೀ ವಿಧಿವಶ

ಮೈಸೂರು: ‘ಬದುಕಲು ಕಲಿಯಿರಿ’ ಪುಸ್ತಕದ ಲೇಖಕ ಹಾಗೂ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಜಗದಾತ್ಮನಂದಜೀ(89) ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಗದಾತ್ಮಾನಂದಜೀ ಅವರು ಕಳೆದ ಒಂದು ತಿಂಗಳಿಂದ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ.
ನಾಳೆ ಬೆಳಗ್ಗೆ 10ರಿಂದ 1 ಗಂಟೆಯವರೆಗೆ ರಾಮಕೃಷ್ಣ ಆಶ್ರಮದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳಿಕ ಮಧ್ಯಾಹ್ನ 1ಗಂಟೆಗೆ ಪೊನ್ನಂಪೇಟೆಯ ಆಶ್ರಮಕ್ಕೆ ಪಾರ್ಥಿವ ಶರೀರ ತರಲಾಗುವುದು ಎಂದು ಆಶ್ರಮದ ಮೂಲಗಳು ತಿಳಿಸಿವೆ. ಜಗದಾತ್ಮಾನಂದಜೀ ಅವರು 9 ಭಾಷೆಗಳಿಗೆ ಭಾಷಾಂತರವಾಗಿರುವ ‘ಬದುಕಲು ಕಲಿಯಿರಿ’ ಕೃತಿ ರಚಿಸಿ ಖ್ಯಾತರಾಗಿದ್ದರು. ಈ ಕೃತಿಯ ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗಿವೆ.

About the author

ಕನ್ನಡ ಟುಡೆ

Leave a Comment