ರಾಜ್ಯ ಸುದ್ದಿ

ಮೈಸೂರು: ಸುತ್ತೂರು ಜಾತ್ರೆಯಲ್ಲಿ ಗ್ಯಾಸ್ ಬಲೂನ್ ಸ್ಫೋಟ, ಶ್ರೀಗಳು ಪಾರು, ತಪ್ಪಿದ ಭಾರಿ ಅನಾಹುತ

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ನೈಟ್ರೋಜನ್(ಗ್ಯಾಸ್) ಬಲೂನ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಜಾತ್ರೆಯಲ್ಲಿ ಶ್ರೀಗಳು ಗ್ಯಾಸ್ ಬಲೂನ್ ಹಾರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡುತ್ತಿದ್ದರು. ಆದರೆ ಶ್ರೀಗಳು ಬಲೂನ್ ಹಾರಿಸುವ ಮೊದಲೇ ಸ್ಫೋಟಗೊಂಡಿದೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಮತ್ತಿತರ ಗಣ್ಯರು ಕುಸ್ತಿ ಪಂದ್ಯಾವಳಿ ಉದ್ಘಾಟನೆ ಮಾಡುತ್ತಿದ್ದಾಗ ಪಕ್ಕದಲ್ಲೇ ಇದ್ದ ನೈಟ್ರೋಜನ್​ ಬಲೂನ್​ ದಿಢೀರನೆ ಸ್ಫೋಟವಾಗಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕ್ಷಣಮಾತ್ರದಲ್ಲಿ ಬಲೂನ್​ ಸ್ಫೋಟವಾಗಿ ಬೆಂಕಿ ಸುತ್ತಲೂ ಆವರಿಸಿಕೊಂಡಿದೆ. ಸುತ್ತೂರು ಶ್ರೀಗಳಿಗೂ ಬೆಂಕಿ ತಗುಲಿದ್ದು, ಹೆಚ್ಚಿನ ಗಾಯಗಳಾಗಿಲ್ಲ.

About the author

ಕನ್ನಡ ಟುಡೆ

Leave a Comment