ರಾಜಕೀಯ

ಮೋದಿ ದೇಶವನ್ನು ಉಳಿಸಲ್ಲ, ನನ್ನ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

ಮಂಡ್ಯ/ನಾಗಮಂಗಲ: ಈ ಶರೀರ ಇರೋವರೆಗೂ ನಾಡಿನ ರೈತರ ಪರ ನನ್ನ ಹೋರಾಟ ನಿಲ್ಲುವುದಿಲ್ಲ. ಮುಂದಿನ ನನ್ನ ಹೋರಾಟಕ್ಕೆ ಸ್ಪೂರ್ತಿ ಸಿಗಬೇಕಾದರೆ ಮೈತ್ರಿ ಪಕ್ಷದ ಅಭ್ಯರ್ಥಿ  ನಿಖಿಲ್‌ ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.

ಪಟ್ಟಣದ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಬದಿಯ ಜವರಪ್ಪ ಪೆಟ್ರೋಲ್‌ ಬಂಕ್ ಪಕ್ಕದಲ್ಲಿ ಶುಕ್ರವಾರ ಆಯೋಜಿಸಿದ್ದ ಮಂಡ್ಯ ಲೋಕಸಭಾ ಚುನಾವಣೆಯ ಮೈತ್ರಿ ಪಕ್ಷದ ಅಭ್ಯ್ಯರ್ಥಿ ನಿಖಿಲ್‌ ಕುಮಾರಸ್ವಾಮಿಪರ ಬಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉಳಿಸುವುದಿಲ್ಲ. ಈ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಿಮ್ಮ ಪ್ರತಿನಿಧಿಯೇ ಹೊರತು, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಎಂಬ ಪ್ರಶ್ನೆ ಯಾರಲ್ಲಿಯೂ ಬರಬಾರದು. ಈ ಭಾಗದಲ್ಲಿ ಜಾತಿ ಇಲ್ಲ. ಯಾವುದೇ ಸಣ್ಣ ಪುಟ್ಟ ವ್ಯತ್ಯಾಸ ಉದ್ಭವಿಸಿದರೂ ಸಹ ಎಲ್ಲವನ್ನೂ ಮೆಟ್ಟಿನಿಂತು ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಿಕೊಡಬೇಕು ಕೈಮುಗಿದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ದೇಶದಲ್ಲಿ ಕಾಂಗ್ರೆಸ್ ಪಕ್ಷ ಕಳೆದುಕೊಂಡಿದ್ದ ಅಸ್ತಿತ್ವವನ್ನು ಕರ್ನಾಟಕದಿಂದಲೇ ಮತ್ತೊಮ್ಮೆ ಪಡೆಯಬೇಕೆಂದು ತೀರ್ಮಾನಿಸಿ, ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಸೇರಿ ಕುಮಾರಸ್ವಾಮಿಯನ್ನು ಮೈತ್ರಿ ಪಕ್ಷದ ಮುಖ್ಯಮಂತ್ರಿಯನ್ನಾಗಿಸಿದ್ದಾರೆ ಎಂದು ತಿಳಿಸಿದರು.

About the author

ಕನ್ನಡ ಟುಡೆ

Leave a Comment