ರಾಜಕೀಯ

ಮೋದಿ ಮತ್ತೆ ಪ್ರಧಾನಿಯಾದರೆ ಸಮಾಜದಲ್ಲಿ ಸಾಮರಸ್ಯ ಇರಲ್ಲ: ಸಿದ್ದರಾಮಯ್ಯ

ನಾಗಮಂಗಲ: ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ದೂರವಿಡಬೇಕೆಂದು ಮೈತ್ರಿ ಪಕ್ಷಗಳ ಪ್ರಮುಖ ಗುರಿಯಾಗಿದೆ. ಮೋದಿ ಮತ್ತೆ ಪ್ರಧಾನಿಯಾದರೆ ಸಮಾಜದಲ್ಲಿ ಸಾಮರಸ್ಯ ಹದಗೆಡಲಿದೆ ಎಂದು ಸಮ್ಮಿಶ್ರ  ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆಯ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮೋದಿ ಮತ್ತೇನಾದರೂ ಪ್ರಧಾನಿಯಾದರೆ ಸರ್ವಾಧಿಕಾರಿಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ದೇಶದ ಹಿತ ದೃಷ್ಟಿಯಿಂದ ಹಾಗೂ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ಮೈತ್ರಿ

ಅಭ್ಯರ್ಥಿ ಬೆಂಬಲಿಸಿ ಎಂದು ಜನರಲ್ಲಿ ಮನವಿ ಮಾಡಿದರು.ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಸೇರಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು. ಕೇಂದ್ರದಲ್ಲಿ ಯುಪಿಎ ಸರಕಾರ ಅಕಾರಕ್ಕೆ ಬರಬೇಕು. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬಾರದು ಎನ್ನುವುದೇ ನಮ್ಮ ನಿರ್ಧಾರವಾಗಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಮತ ಕೇಳಲು ಬಂದರೆ ಮಂಗಳಾರತಿ ಮಾಡಿ ಕಳುಹಿಸಿ ಎಂದು ತಿಳಿಸಿದರು.ಮಂಡ್ಯದಲ್ಲಿ ಅಭ್ಯರ್ಥಿ ಹಾಕದೇ ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬೆಂಬಲ ನೀಡಿದೆ.

ಮೊನ್ನೆ ಮೈಸೂರಿಗೆ ಬಂದ ಮೋದಿ ಪಕ್ಷೇತರ ಅಭ್ಯರ್ಥಿಗೆ ಮತ ಹಾಕಿ ಎಂದಿದ್ದಾರೆ. ಇವರು ಪಕ್ಷೇತರ ಅಭ್ಯರ್ಥಿ ಅಲ್ಲ, ಬಿಜೆಪಿ ಅಭ್ಯರ್ಥಿ. ಈ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕಾ? ಬೇಡವೇ ಬೇಡ. ಮೈತ್ರಿ ಪಕ್ಷದಲ್ಲಿ ವ್ಯತ್ಯಾಸ ಇದೆ ಎಂದು ಹೇಳುತ್ತಿದ್ದಾರೆ. ಅದಕ್ಕಾಗಿಯೇ ನಾನು ಮತ್ತು ದೇವೇಗೌಡರು ಒಟ್ಟಿಗೆ ಓಡಾಡ್ತಾ ಇದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

About the author

ಕನ್ನಡ ಟುಡೆ

Leave a Comment