ರಾಜಕೀಯ

ಯಡಿಯೂರಪ್ಪ ಜೊತೆ ಊಟ ಮಾಡಿದ ಕಾರಣಕ್ಕೆ ಬಿಜೆಪಿ ಸೇರೋಕೆ ಆಗುತ್ತಾ.? ಶ್ಯಾಮನೂರು ಶಿವಶಂಕರಪ್ಪ

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಊಟ ಮಾಡಿದ ಮಾತ್ರಕ್ಕೆ ಬಿಜೆಪಿ ಸೇರೋಕೆ ಆಗುತ್ತಾ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸೇರುವ ಮಾತುಗಳನ್ನು ತಳ್ಳಿ ಹಾಕಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ಯಾಮನೂರು ಶಿವಶಂಕರಪ್ಪ ಅವರು, ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಬಿಡುವ ಪ್ರಶ್ನೆಯೇ ಇಲ್ಲ. ಬೇಕಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್‌ ಪಕ್ಷಕ್ಕೆ ಬರಲಿ ಎಂದು ಹೇಳಿದ್ದಾರೆ.
ನಾನು ಬಿಜೆಪಿ ಸೇರುವ ವಿಚಾರ ಸುಳ್ಳು. ಕಳೆದ 50 ವರ್ಷಗಳಿಂದಲೂ ಕಾಂಗ್ರೆಸ್‌ ನಲ್ಲಿದ್ದೇನೆ. ಆಹ್ವಾನ ನೀಡಿದ ತಕ್ಷಣ ಬಿಜೆಪಿಗೆ ಹೋಗಲು ಸಾಧ್ಯವೇ? ಯಡಿಯೂರಪ್ಪನ ಜತೆ ಊಟ ಮಾಡಿದ ತಕ್ಷಣ ಬಿಜೆಪಿ ಸೇರುತ್ತಾರಾ? ಬೇಕಾದರೆ ಯಡಿಯೂರಪ್ಪನವರೇ ಕಾಂಗ್ರೆಸ್‌ಗೆ ಬರಲಿ ಎಂದು ಹೇಳಿದರು.
 

 

About the author

ಕನ್ನಡ ಟುಡೆ

Leave a Comment