ರಾಜ್ಯ ಸುದ್ದಿ

ಯಾವ ಆಧಾರದ ಮೇಲೆ ನಮ್ಮ ಮೇಲೆ ದೊಡ್ಡ ಆರೋಪ ಮಾಡಿದ್ದಿರಿ: ರಾಹುಲ್ ಗಾಂಧಿಗೆ ಅಮಿತ್ ಶಾ ಪ್ರಶ್ನೆ

ನವದೆಹಲಿ: ಯಾವ ಆಧಾರದ ಮೇಲೆ ನಮ್ಮ ಮೇಲೆ ರಫೇಲ್ ಒಪ್ಪಂದ ಕುರಿತು ದೊಡ್ಡ ಆರೋಪವನ್ನು ಮಾಡಿದ್ದಿರಿ ಸುಳ್ಳು ಆರೋಪಗಳನ್ನು ಮಾಡಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಲಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಆಗ್ರಹಿಸಿದ್ದಾರೆ. ರಫೇಲ್ ಒಪ್ಪಂದ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಮಿತ್ ಶಾ ಅವರು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದಿಂದ ಒಪ್ಪಂದದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವಿಲ್ಲ ಎಂಬುದು ಸಾಬೀತಾಗಿದೆ. ಮಕ್ಕಳ ರೀತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದ ರಾಹುಲ್ ಗಾಂಧಿಯವರು ಇದೀಗ ಕ್ಷಮೆಯಾಚಿಸಲಿ. ಯಾವ ಆಧಾರದ ಮೇಲೆ ನಮ್ಮ ಮೇಲೆ ಇಂತಹ ದೊಡ್ಡ ಆರೋಪವನ್ನು ಮಾಡಲಾಗಿತ್ತು ಎಂಬುದನ್ನು ಬಹಿರಂಗಪಡಿಸಲಿ ಎಂದು ತಿಳಿಸಿದ್ದಾರೆ.
ಸತ್ಯಕ್ಕೆ ಎಂದಿಗೂ ಜಯವಿದೆ. ನ್ಯಾಯಾಲಯದ ಆದೇಶ ರಫೇಲ್ ಒಪ್ಪಂದದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷರು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪಗಳನ್ನು ಮಾಡಿರುವುದು ಇದರಿಂದ ಬಹಿರಂಗಗೊಂಡಿದೆ. ಒಪ್ಪಂದ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ತಪ್ಪುಗಳಾಗಿಲ್ಲ ಎಂಬುದು ನ್ಯಾಯಾಲಯಕ್ಕೆ ಗೊತ್ತಾಗಿದೆ. ವಾಣಿಜ್ಯ ಲಾಭಕ್ಕಾಗಿಯೂ ಈ ಒಪ್ಪಂದ ನಡೆದಿಲ್ಲ ಎಂಬುದು ತಿಳಿದುಬಂದಿದೆ. ಭ್ರಷ್ಟಚಾರದ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್’ಗೆ ಒಪ್ಪಂದವನ್ನು ಪ್ರಶ್ನಿಸುವ, ಆರೋಪ ಮಾಡುವ ಹಕ್ಕಿದೆ. ಹಲವು ಸಮಯದಿಂದಲೂ ಕಾಂಗ್ರೆಸ್ ನಾಯಕರು ದೇಶವನ್ನು ಕಾಯುತ್ತಿರುವ ನಾಯಕ ಕಳ್ಳನೆಂದು ಹೇಳುತ್ತಲೇ ಇದ್ದಾರೆ. ಅದರ ಸತ್ಯಾ ಸತ್ಯತೆ ಇದೀಗ ಬಹಿರಂಗಗೊಂಡಿದೆ ಎಂದಿದ್ದಾರೆ.

About the author

ಕನ್ನಡ ಟುಡೆ

Leave a Comment