ರಾಷ್ಟ್ರ ಸುದ್ದಿ

ಯುಪಿ ಬಿಜೆಪಿ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ: ಆಡ್ವಾಣಿ, ಮುರಳಿ ಮನೋಹರ್ ಜೋಷಿ ಹೆಸರು ನಾಪತ್ತೆ

ಹೊಸದಿಲ್ಲಿ: ಉತ್ತರಪ್ರದೇಶಕ್ಕೆ ತಾರಾ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ. ಈ ಪೈಕಿ, ಪ್ರಧಾನಿ ಮೋದಿ ಮುಂತಾದವರ ಹೆಸರುಗಳಿದ್ದು, ಪಟ್ಟಿಯಲ್ಲಿ ಆಡ್ವಾಣಿ ಮುರಳಿ ಮನೋಹರ್ ಜೋಷಿ ಹೆಸರು ಕೈಬಿಟ್ಟಿದೆ.

ಉತ್ತರಪ್ರದೇಶ ರಾಜ್ಯಕ್ಕೆ ಬಿಜೆಪಿ ಮಂಗಳವಾರ( ಮಾರ್ಚ್ 26, 2019) 40 ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್, ಅರುಣ್‌ ಜೇಟ್ಲಿ, ನಿತಿನ್‌ ಗಡ್ಕರಿ, ಸುಷ್ಮಾ ಸ್ವರಾಜ್ ಹಾಗೂ ಉಮಾ ಭಾರತಿಯ ಹೆಸರುಗಳು 40 ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಆದರೆ, ತಾರಾ ಪ್ರಚಾರಕರ ಪಟ್ಟಿಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಆಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿಯ ಹೆಸರುಗಳು ಈ ಪಟ್ಟಿಯಲ್ಲಿ ನಾಪತ್ತೆಯಾಗಿದೆ. ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲೂ ಆಡ್ವಾಣಿ ಬದಲು ಅಮಿತ್‌ ಶಾಗೆ ಟಿಕೆಟ್ ನೀಡಲಾಗಿತ್ತು. ಅಲ್ಲದೆ, ಮುರಳಿ ಮನೋಹರ್‌ ಜೋಷಿಗೂ ಸಹ ಇದುವರೆಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಈಗ ತಾರಾ ಪ್ರಚಾರಕರ ಪಟ್ಟಿಯಲ್ಲೂ ಆಡ್ವಾಣಿ, ಮುರಳಿ ಮನೋಹರ್ ಜೋಷಿಯ ಹೆಸರುಗಳನ್ನು ಕೈಬಿಟ್ಟಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆಯಿದೆ

ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳಿದ್ದು, ಈ ಪೈಕಿ 2014ರಲ್ಲಿ 70ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಈಗ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಬೇಕಾದಲ್ಲಿ ಉತ್ತರ ಪ್ರದೇಶದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅನಿವಾರ್ಯತೆ ಇದೆ. ಹೀಗಾಗಿ, 40 ತಾರಾ ಪ್ರಚಾರಕರ ಪಟ್ಟಿಯನ್ನು ಈ ರಾಜ್ಯಕ್ಕೆ ಬಿಜೆಪಿ ಬಿಡುಗಡೆಗೊಳಿಸಿದೆ. ಇನ್ನು, ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್‌ 11 ರಿಂದ ಮೇ 19ರವರೆಗೆ ಚುನಾವನೆ ನಡೆಯಲಿದೆ. ನಂತರ, ಮೇ 23ರಂದು ದೇಶಾದ್ಯಂತ ಎಲ್ಲ ಲೋಕಸಭೆ ಕ್ಷೇತ್ರಗಳ ಫಲಿತಾಂಶ ಹೊರಹೊಮ್ಮಲಿದೆ.

 

About the author

ಕನ್ನಡ ಟುಡೆ

Leave a Comment