ಕ್ರೈಂ

ಯುವತಿಗೆ ಉದ್ಯೋಗದ ಆಮಿಷವೊಡ್ಡಿ ಅತ್ಯಾಚಾರ ಎಸೆದು ಕಾಮುಕ ಪಾರರಿ

ಬೆಂಗಳೂರು: ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯನ್ನು ಕರೆಸಿಕೊಂಡ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪಾರರಿ ಆಗಿದ್ದು, ಘಟನೆ ಬೆಳಕಿಗೆ ಬಂದಿದೆ.ಫೆ. 21ರಂದು ನೇಪಾಳ ಮೂಲದ 22 ವರ್ಷದ ಯುವತಿಯನ್ನು ನೇಪಾಳ ಮೂಲದವನೇ ಆದ ಖಾಸಗಿ ಹೋಟೆಲ್‌ನಲ್ಲಿ ಕ್ಯಾಶಿಯರ್‌ ಆಗಿದ್ದ ಸುರೇಶ್‌ ಎಂಬಾತ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಕಳೆದ 5 ದಿನಗಳ ಹಿಂದೆ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಯುವತಿಯನ್ನು ಕೆಲಸ ಕೊಡಿಸುವುದಾಗಿ ಹೇಳಿದ ಆರೋಪಿ, ಹೋಟೆಲ್‌ಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದಾನೆ. ಈ ಮೊದಲೇ ಆತನಿಗೆ ಮದುವೆಯಾಗಿರುವ ವಿಚಾರ ತಿಳಿದ ಯುವತಿ ಆರೋಪಿ ವಿರುದ್ಧ ದೂರನ್ನು ದಾಖಲಿಸಿದ್ದಾಳೆ.ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

 

 

About the author

ಕನ್ನಡ ಟುಡೆ

Leave a Comment