ರಾಷ್ಟ್ರ ಸುದ್ದಿ

ರಫೆಲ್​ ​ ಒಪ್ಪಂದದ ಕುರಿತು ಮಾಹಿತಿ ಒದಗಿಸುವಂತೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ನವದೆಹಲಿ: ರಫೆಲ್​ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಂಡ ಪ್ರಕ್ರಿಯೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್​ಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಸೂಚಿಸಿದೆ.

ರಫೆಲ್​ ಒಪ್ಪಂದದ ಕುರಿತು ತನಿಖೆ ನಡೆಸುವಂತೆ ಕೋರಿ 2 ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂ ಕೋರ್ಟ್​ಗೆ ಸಲ್ಲಿಕೆಯಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​, ನ್ಯಾಯಮೂರ್ತಿ ಎಸ್​.ಕೆ. ಕೌಲ್​ ಮತ್ತು ನ್ಯಾಯಮೂರ್ತಿ ಕೆ.ಎಂ. ಜೋಸೆಫ್​ ಅವರಿದ್ದ ಪೀಠ ಒಪ್ಪಂದದ ಪ್ರಕ್ರಿಯೆಯ ಮಾಹಿತಿ ಒದಗಿಸುವಂತೆ ಸೂಚಿಸಿದೆ. ಆದರೆ, ಒಪ್ಪಂದದ ಮೊತ್ತ ಮತ್ತು ತಾಂತ್ರಿಕ ವಿವರ ಕುರಿತಾದ ಮಾಹಿತಿ ನೀಡುವ ಅಗತ್ಯವಿಲ್ಲ ತಿಳಿಸಿದೆ.

ಸಾರ್ವನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಅಕ್ಟೋಬರ್​ 31ಕ್ಕೆ ನಿಗದಿಯಾಗಿದ್ದು, ಅಕ್ಟೋಬರ್​ 29ರೊಳಗೆ ಮಾಹಿತಿಯನ್ನು ಸಲ್ಲಿಸಬೇಕು ಎಂದು ಕೋರ್ಟ್ ಸೂಚಿಸಿದೆ.ಕೇಂದ್ರ ಸರ್ಕಾರ ಸಾರ್ವನಿಕ ಹಿತಾಸಕ್ತಿ ಅರ್ಜಿಯನ್ನು ವಿರೋಧಿಸಿದ್ದು, ಅರ್ಜಿದಾರರು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಬೇಕು. ರಾಷ್ಟ್ರೀಯ ಭದ್ರತೆಗೆ ಇದರಿಂದ ತೊಂದರೆಯಾಗುತ್ತದೆ ಎಂದು ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಅವರು ಕೇಂದ್ರದ ಪರ ವಾದಿಸಿದರು.

About the author

ಕನ್ನಡ ಟುಡೆ

Leave a Comment