ರಾಷ್ಟ್ರ ಸುದ್ದಿ

ರಫೇಲ್ ಒಪ್ಪಂದ ವಿವಾದ: ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮತ್ತೊಂದು ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಹೊಸ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ರಫೇಲ್ ಒಪ್ಪಂದ ಕುರಿತು ಈಗಾಗಲೇ ಅನೇಕ ಅರ್ಜಿಗಳು ಬಂದಿದ್ದು, ಅವುಗಳ ವಿಚಾರಣೆ ನಡೆಸುತ್ತಿರುವಾಗ ಹೊಸ ಅರ್ಜಿ ವಿಚಾರಣೆ ನಡೆಸುವ ಅಗತ್ಯವೇನಿದೆ ಎಂದು ನ್ಯಾಯಮೂರ್ತಿಗಳು ಪ್ರಶ್ವಿಸಿದ್ದಾರೆ.
ರಫೇಲ್ ಒಪ್ಪಂದ ಕುರಿತಂತೆ ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಅರ್ಜಿ ಸಲ್ಲಿಸಿವೆ. ಅರ್ಜಿ ಸಂಬಂಧ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅ.29ರೊಳಗೆ ಮುಚ್ಚಿದ ಲಕೋಟೆಯಲ್ಲಿ ಒಪ್ಪಂದ ಸಂಬಂಧ ವಿವರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಇದರಂತೆ ಕೇಂದ್ರ ಸರ್ಕಾರ ಅ.27 ರಂದು ಒಪ್ಪಂದದ ವಿವರವನ್ನು ಸುಪ್ರೀಂಕೋರ್ಟ್’ಗೆ ನೀಡಿತ್ತು.

About the author

ಕನ್ನಡ ಟುಡೆ

Leave a Comment