ರಾಷ್ಟ್ರ ಸುದ್ದಿ

ರಫೇಲ್ ಯುದ್ಧ ವಿಮಾನ ಖರೀದಿ ಬೆಲೆ ಕುರಿತು ತಿಳಿದೂ ಕಾಂಗ್ರೆಸ್ ಜನರನ್ನು ತಪ್ಪು ಹಾದಿಗೆಳೆಯುತ್ತಿದೆ: ನಿರ್ಮಲಾ ಸೀತಾರಾಮನ್

ಮುಂಬೈ: ರಫೇಲ್ ಯುದ್ಧ ವಿಮಾನ ಖರೀದಿ ಬೆಲೆ ಕುರಿತು ತಿಳಿದೂ ತಿಳಿದು ಕಾಂಗ್ರೆಸ್ ಜನರನ್ನು ತಪ್ಪು ಹಾದಿಗೆಳೆಯುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಹೇಳಿದ್ದಾರೆ.
ಮುಂಬೈನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಅವರು, ರಕ್ಷಣಾ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನು ಕೇಳದೆಯೇ ಕಾಂಗ್ರೆಸ್ ಅದ್ಭುತವಾದ ಧೈರ್ಯವನ್ನು ಪ್ರದರ್ಶಿಸಿದೆ. ವಿಮಾನ ಖರೀದಿ ಬೆಲೆ ಕುರಿತು ತಿಳಿದೂ ತಿಳಿದು ಕಾಂಗ್ರೆಸ್ ಜನರನ್ನು ತಪ್ಪು ಹಾದಿಗೆಳೆಯುತ್ತಿದೆ ಎಂದು ತಿಳಿಸಿದ್ದಾರೆ. ರಫೇಲ್ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್ ಆದೇಶವನ್ನು ದೇಶದ ಮೊದಲ ಕುಟುಂಬ ಕೇಳುತ್ತಿಲ್ಲ ಎಂದಿದ್ದಾರೆ.

About the author

ಕನ್ನಡ ಟುಡೆ

Leave a Comment