ರಾಜಕೀಯ

ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ಮನುಷ್ಯ, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಬಾಗಲಕೋಟೆ: ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ಮನುಷ್ಯ, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ.
ಜಮಖಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್‌ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬುದೆಲ್ಲ ವದಂತಿ. ಅವರಿಗೆ ಯಾವ ಅಸಮಾಧಾನ, ಅತೃಪ್ತಿಯೂ ಇಲ್ಲ. ಅವರನ್ನು ತೆಗೆದು ಅವರ ಮನೆಯಲ್ಲೇ ಸಚಿವ ಸ್ಥಾನ ಕೊಟ್ಟಿದ್ದೇವೆ. ಹೀಗಾಗಿ ಇಲ್ಲಿ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಇನ್ನು ರಮೇಶ್‌ ಜಾರಕಿಹೊಳಿ ನನ್ನ ಒಳ್ಳೇಯ ಸ್ನೇಹಿತ. ಅವರ ರಾಜೀನಾಮೆ ವೀಡಿಯೋ ವೈರಲ್‌ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ಮನುಷ್ಯ. ಅವರು ಎಲ್ಲಿಯೂ ಹೋಗಲ್ಲ. ಒಂದೆರಡು ದಿನ ಈ ರೀತಿಯ ವದಂತಿಗಳು ಇರುತ್ತದೆ. ಅವರಿಗೆ ಯಾವುದೇ ಅಸಮಾಧಾನವೂ ಇಲ್ಲ. ಅತೃಪ್ತಿಯೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

About the author

ಕನ್ನಡ ಟುಡೆ

Leave a Comment