ರಾಜಕೀಯ

ರಮೇಶ್ ಜಾರಕಿಹೊಳಿ ರಾಜಿನಾಮೆ ನಿರ್ಧಾರ: ಸಚಿವ ಸತೀಶ್ ಜಾರಕಿಹೊಳಿ ಸಂಧಾನ ಸೂತ್ರ

ಬೆಂಗಳೂರು: ತಮ್ಮನ್ನು ಸಂಪುಟದಿಂದ ಕೈಬಿಟ್ಟಿರುವ ನಿರ್ಧಾರದಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನಿರ್ಧಾರದಿಂದ ಕಾಂಗ್ರೆಸ್ ಪಾಳೇಯದಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಮನವೊಲಿಸುವ ಎಲ್ಲಾ ರೀತಿಯ ಪ್ರಯತ್ನಗಳು ನಡೆಯುತ್ತಿವೆ.
ರಮೇಶ್‌ ಜಾರಕಿ ಹೊಳಿ ಅವರನ್ನು ತಣ್ಣಗಾಗಿಸಲು ಸಹೋದರ, ಸಚಿವ ಸತೀಶ್‌ ಜಾರಕಿಹೊಳಿ ಅವರ ಮೂಲಕ ಕಾಂಗ್ರೆಸ್‌ ನಾಯಕರು ಕಸರತ್ತು ಆರಂಭಿಸಿದ್ದಾರೆ. ಸಚಿವ ಸ್ಥಾನದಿಂದ ಕೈಬಿಟ್ಟಿರುವ ಕುರಿತು ಅಸಮಾಧಾನ ಹೊಂದಿರುವ ತಮ್ಮ ಸಹೋದರ ರಮೇಶ್‌ ಜಾರಕಿಹೊಳಿ ಎಲ್ಲೂ ಹೋಗಿಲ್ಲ. ಅವರ ನಡವಳಿಕೆ ಬಗ್ಗೆ ನನಗೆ ಅರಿವಿತ್ತು. ಅವರೊಂದಿಗೆ ಖುದ್ದು ನಾನೇ ಮಾತನಾಡುತ್ತೇನೆ, ಅವರ ಮನವೊಲಿಸುತ್ತೇನೆ ಎಂದು ನೂತನ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.
ಸಚಿವ ಸ್ಥಾನದಿಂದ ಕೈಬಿಟ್ಟ ನಂತರ ಅವರನ್ನು ಇನ್ನೂ ಭೇಟಿಯಾಗಿಲ್ಲ,  ಸಂಪುಟ ವಿಸ್ತರಣೆಯಾದಾಗ ಇದೆಲ್ಲಾ ಸಾಮಾನ್ಯ. ಪಕ್ಷದ ವೇದಿಕೆಯಲ್ಲೇ ಇದೆಲ್ಲಾವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಸತೀಶ್ ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment