ರಾಜಕೀಯ

ರಾಜಕೀಯ ನಿಂತ ನೀರಲ್ಲ, ಸಿದ್ದರಾಮಯ್ಯ ಬಿಜೆಪಿಗೆ ಬರುತ್ತಾರೋ ಇಲ್ಲವೋ ಗೊತ್ತಿಲ್ಲ: ಮಾಜಿ ಡಿಸಿಎಂ ಆರ್. ಅಶೋಕ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ  ಬರುತ್ತಾರೋ ಇಲ್ಲವೋ ಗೊತ್ತಿಲ್ಲ, ಆದರೆ ಸರ್ಕಾರ ಮಾತ್ರ ಉಳಿಯುವುದಿಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್‌ ಸಿದ್ದರಾಮಯ್ಯ ಅವರು ನಮ್ಮ ಪಕ್ಷದವರನ್ನೇನು ಸಂಪರ್ಕಿಸಿಲ್ಲ.  ಅವರ ಪಕ್ಷದ ಯಾವುದೇ ಶಾಸಕರು ನಮ್ಮನ್ನು ಸಂಪರ್ಕಿಸಿಲ್ಲ, ಆದರೆ ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರೂ ಅಲ್ಲ. ಪರಮ ಶತ್ರುವಾಗಿದ್ದ ದೇವೇಗೌಡರೊಂದಿಗೆ ಸಿದ್ದರಾಮಯ್ಯ ಹೋಗಿರುವುದೇ ಇದಕ್ಕೆ ಸಾಕ್ಷಿ ಎಂದರು.
ಮುಖ್ಯಮಂತ್ರಿಯಾದವರಿಗೆ ತಾಳ್ಮೆ ಇರಬೇಕು. ಗಡುವು ನೀಡುವುದು ದೇವರು, ರಾಜ್ಯದ ಜನತೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಮುಖ್ಯಮಂತ್ರಿಗಳು ಬೇಜವಾಬ್ಧಾರಿತನ ತೋರುತ್ತಿದ್ದಾರೆ. ರೈತರ ಮೇಲೆ ಹರಿಹಾಯುತ್ತಿದ್ದಾರೆ, ಮಾಧ್ಯಮಗಳ ಮೇಲೆ ಹರಿಹಾಯುತ್ತಾರೆ, ವಿಷ್ಣು ವರ್ಧನ್‌ ಅವರ ಸ್ಮಾರಕ ವಿಚಾರದಲ್ಲೂ  ಮುಖ್ಯಮಂತ್ರಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದು ಸರಿಯಿಲ್ಲ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment