ರಾಷ್ಟ್ರ ಸುದ್ದಿ

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ: ಕಾಂಗ್ರೆಸ್ ಮುಖ್ಯಮಂತ್ರಿಗಳ ಪ್ರಮಾಣವಚನ

ಜೈಪುರ/ಭೋಪಾಲ್‌/ರಾಯಪುರ: ಕಾಂಗ್ರೆಸ್ ನಾಯಕ ಅಶೋಕ್‌ ಗೆಹ್ಲೋಟ್‌ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಸೋಮವಾರ ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಅವರನ್ನು ಗೆಹ್ಲೋಟ್, ಪೈಲಟ್‌ ಮತ್ತು ಇತರ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಬಿಗಿ ಭದ್ರತೆಯ ನಡುವೆ ಸಭಾಂಗಣಕ್ಕೆ ಕರೆತಂದರು.

ಪ್ರಮಾಣವಚನ ಸಮಾರಂಭದಲ್ಲಿ ಭಾರೀ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು. ಗೆಹ್ಲೋಟ್‌ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಮಲ್‌ನಾಥ್‌ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಹಾಗೂ ಭೂಪೇಶ್ ಬಘೇಲ್ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ 100 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿದೆ. ಆ ಮೂಲಕ ಪ್ರತಿ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳನ್ನೇ ಪರ್ಯಾಯವಾಗಿ ಅಧಿಕಾರಕ್ಕೇರಿಸುವ ರಾಜಸ್ಥಾನದ ಪರಂಪರೆ ಮುಂದುವರಿದಿದೆ.

ರಾಜಸ್ಥಾನ ರಾಜ್ಯಪಾಲ ಕಲ್ಯಾಣ್‌ ಸಿಂಗ್‌ ಅವರು ಮುಖ್ಯಮಂತ್ರಿಯಾಗಿ ಅಶೋಕ್‌ ಗೆಹ್ಲೋಟ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಪಾಲ್ಗೊಂಡಿದ್ದರು.

ಪ್ರಮಾಣವಚನ ಸ್ವೀಕಾರ ಮುಗಿದ ಬಳಿಕ ರಾಹುಲ್ ಗಾಂಧಿ ಟ್ವಿಟರ್ ಮೂಲಕ ರಾಜಸ್ಥಾನದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರೂ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಪ್ರತಿಪಕ್ಷಗಳ ಒಗ್ಗಟ್ಟು ಹಾಗೂ ಬಲ ಪ್ರದರ್ಶನದ ಸಂಕೇತವಾಗಿ ಮಾಜಿ ಪ್ರಧಾನಿ ಎಚ್‌ಡಿ. ದೇವೇಗೌಡ, ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಭಾಗವಹಿಸಿದ್ದರು.

ಆದರೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಗೈರು ಹಾಜರಾಗಿದ್ದರು ಎಂದು ಎಎನ್‌ಐ ತಿಳಿಸಿದೆ. ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ಎನ್‌ಸಿಪಿಯ ಶರದ್ ಪವಾರ್, ಎಲ್‌ಜೆಡಿಯ ಶರದ್ ಯಾದವ್, ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಡಿಎಂಕೆ ನಾಯಕ ಎಂ.ಕೆ ಸ್ಟಾಲಿನ್‌, ಜೆಎಂಎಂ ನಾಯಕ ಹೇಮಂತ್ ಸೊರೇನ್ ಮತ್ತು ಜೆವಿಎಂ ನಾಯಕ ಬಾಬುಲಾಲ್ ಮರಾಂಡಿ ಕೂಡ ಭಾಗವಹಿಸಿದ್ದರು.

ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಅವರನ್ನು ಗೆಹ್ಲೋಟ್, ಪೈಲಟ್‌ ಮತ್ತು ಇತರ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಬಿಗಿ ಭದ್ರತೆಯ ನಡುವೆ ಸಭಾಂಗಣಕ್ಕೆ ಕರೆತಂದರು. ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಅವರನ್ನು ಗೆಹ್ಲೋಟ್, ಪೈಲಟ್‌ ಮತ್ತು ಇತರ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಬಿಗಿ ಭದ್ರತೆಯ ನಡುವೆ ಸಭಾಂಗಣಕ್ಕೆ ಕರೆತಂದರು. ಪ್ರಮಾಣವಚನ ಸಮಾರಂಭದಲ್ಲಿ ಭಾರೀ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.

ಗೆಹ್ಲೋಟ್‌ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಮಲ್‌ನಾಥ್‌ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಹಾಗೂ ಭೂಪೇಶ್ ಬಘೇಲ್ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಭಾರೀ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು. ಗೆಹ್ಲೋಟ್‌ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಮಲ್‌ನಾಥ್‌ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಹಾಗೂ ಭೂಪೇಶ್ ಬಘೇಲ್ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

About the author

ಕನ್ನಡ ಟುಡೆ

Leave a Comment