ರಾಷ್ಟ್ರ ಸುದ್ದಿ

ರಾಜಸ್ಥಾನ ಸಿಎಂ ಗೆಹ್ಲೋಟ್, ಡೆಪ್ಯುಟಿ ಸಿಎಂ ಸಚಿನ್ ಪೈಲಟ್ ಪ್ರಮಾಣ ವಚನ ಸ್ವೀಕಾರ

ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರು ಸೋಮವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜಸ್ಥಾನ ರಾಜಧಾನಿ ಜೈಪುರದ ಆಲ್ಬರ್ಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಪ್ರಸ್ತುತತೆಯಲ್ಲಿ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಕಟ್ ಅವರಿಗೆ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು. ಕಳೆದ ಡಿ.11 ರಂದು ಕಾಂಗ್ರೆಸ್ ಪಕ್ಷ 199 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯ 99 ಸ್ಥಾನಗಳನ್ನು ಗೆದ್ದು ಏಕೈಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎನ್’ಸಿಪಿ ಮುಖ್ಯಸ್ಥ ಶರದ್ ಯಾದವ್, ಎಲ್’ಜೆಡಿ ನಾಯಕ ಶರದ್ ಯಾದವ್, ಜಮ್ಮು ಮತ್ತು ಕಾಶ್ಮೀರದ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆರ್’ಜೆಡಿ ನಾಯಕ ತೇಜಸ್ವಿ ಯಾದವ್, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಜೆಎಂಎಂ ನಾಯಕ ಹೇಮಂತ್ ಸೊರೆನ್, ಡೆವಿಎಂ ನಾಯಕ ಬಾಬುಲಾಲ್ ಮರಂಡಿ ಹಾಜರಿದ್ದರು.

About the author

ಕನ್ನಡ ಟುಡೆ

Leave a Comment