ರಾಜಕೀಯ

ರಾಜೀನಾಮೆ ನೀಡದಂತೆ, ವರ್ತನೆ ಬದಲಿಸಿಕೊಳ್ಳಲು ರಮೇಶ್ ಮನವೊಲಿಸುತ್ತೇನೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಇತ್ತೀಚೆಗೆ ನಡೆದ ಸಂಪುಟ ಪುನಾರಚನೆ ವೇಳೆ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲಾಗಿದೆ, ಆದರೆ ಅವರ ಸಹೋದರ  ರಮೇಶ್ ಜಾರಕಿಹೊಳಿ ಅವರನ್ನು ಕೈಬಿಡಲಾಗಿದೆ.
ಇದರಿಂದ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ, ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ, ಆದರೆ ಸಹೋದರನನ್ನು ಮನವೊಲಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ಸತೀಶ್ ಹೆಗಲಿಗೆ ನೀಡಿದೆ. ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಇದುವರೆಗೂ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿಲ್ಲ, ಶೀಘ್ರವೇ ಅವರನ್ನು ಭೇಟಿ ಮಾಡಿ ರಾಜಿನಾಮೆ ನೀಡದಂತೆ ಮನವೊಲಿಸುವುದಾಗಿ ತಿಳಿಸಿದ್ದಾರೆ.
ರಮೇಶ್ ಸಚಿವರಾಗಿದ್ದ ವೇಳೆ ತಮ್ಮ ವರ್ತನೆ ಬದಲಿಸಿಕೊಳ್ಳುವಂತೆ ಅವರಿಗೆ ಸಲಹೆ ನೀಡಿದ್ದೆ, ಅಧಿಕಾರಿಗಳ ಜೊತೆ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ತಿಳಿಸಿದ್ದೆ, ಆದರೆ ಅದನ್ನು ಅವರು ಮಾಡಲಿಲ್ಲ, ಈಗಲಾದರೂ ಅವರು ತಮ್ಮ ವರ್ತನೆ ಬದಲಿಸಿಕೊಳ್ಳಬೇಕು ಎಂದು ಸತೀಶ್ ತಿಳಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರಲು ಕಳೆದ ಆರು ತಿಂಗಳಿಂದ ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗಿಲ್ಲ, ಕಾಂಗ್ರೆಸ್ ನ ಯಾವೊಬ್ಬ ಶಾಸಕರು ಪಕ್ಷ ತೊರೆಯುತ್ತಿಲ್ಲ, ತನ್ನ ಪ್ಲಾನ್ ನಲ್ಲಿ ಬಿಜೆಪಿ ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment