ರಾಜ್ಯ

ರಾಜ್ಯದಲ್ಲಿ ಒಟ್ಟು 5.10 ಕೋಟಿ ಮತದಾರರು: ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌

ಬೆಂಗಳೂರು:  ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಒಟ್ಟು 5.10 ಕೋಟಿ ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ನಿನ್ನೆ ಕೊನೆಯ ದಿನವಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದ ಸಂಜೀವ್ ಕುಮಾರ್ ಅವರು ಈ ಮಾಹಿತಿ ನೀಡಿದ್ದಾರೆ. ‘ಮಾರ್ಚ್‌ 14ರೊಳಗೆ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡಲಾಗುವುದು. ಅದರಂತೆ 2018ರ ವಿಧಾನಸಭಾ ಚುನಾವಣೆಗೆ ಒಟ್ಟು ಮತದಾರರ ಸಂಖ್ಯೆ 5.10 ಕೋಟಿ ಆಗಲಿದೆ ಎಂದು ಹೇಳಿದ್ದಾರೆ.

ಫೆಬ್ರವರಿ 28ಕ್ಕೆ ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಾರ 4.96 ಕೋಟಿ ಮತದಾರರು ಇದ್ದರು. ಬಳಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮಾರ್ಚ್ 14ರವರೆಗೆ ಅವಕಾಶ ನೀಡಲಾಗಿತ್ತು. ಅದರಲ್ಲಿ 13.46 ಲಕ್ಷ ಅರ್ಜಿಗಳು ಸ್ವೀಕಾರಗೊಂಡಿದ್ದು, ಆ ಪೈಕಿ 66 ಸಾವಿರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 12.02 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 77 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಅದರಂತೆ ಈ ಬಾರಿ ಮತದಾರರ ಸಂಖ್ಯೆ 5.10 ಕೋಟಿ ಆಗಬಹುದು ಎಂದು ಸಂಜೀವ್ ಕುಮಾರ್ ಅವರು ತಿಳಿಸಿದರು. ಉಳಿದಂತೆ ಫಾರಂ-7ರಡಿ 2.22 ಲಕ್ಷ ಅರ್ಜಿಗಳು ಬಂದಿದ್ದು 8 ಸಾವಿರ ಅರ್ಜಿಗಳನ್ನು ತಿರಸ್ಕರಿಸಿ 2.08 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

 

 

About the author

ಕನ್ನಡ ಟುಡೆ

Leave a Comment