ರಾಜ್ಯ ಸುದ್ದಿ

ರಾಜ್ಯದಲ್ಲಿ 167 ಜನರಲ್ಲಿ ಎಚ್‌1ಎನ್‌1 ಪ್ರಕರಣ ಪತ್ತೆ, ಹೈ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಒಟ್ಟು 102  ಎಚ್‌1ಎನ್‌1 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜನವರಿಯಿಂದ ಸೆಪ್ಟೆಂಬರ್ 25ರವರೆಗೆ ಒಟ್ಟು 3,968 ಮಂದಿಯನ್ನು ಎಚ್ 1 ಎನ್ 1 ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 167 ಮಂದಿಯಲ್ಲಿ ಎಚ್‌1ಎನ್‌1 ಸೋಂಕು ಕಾಣಿಸಿಕೊಂಡಿದೆ. ಸೆಪ್ಟೆಂಬರ್‌ ತಿಂಗಳೊಂದರಲ್ಲಿ 102 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಈ ಸಂಬಂಧ ಆರೋಗ್ಯ ಇಲಾಖೆ ಬೆಂಗಳೂರು, ಶಿವಮೊಗ್ಗ, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದೆ. ಎಚ್‌1ಎನ್‌1 ವೈರಾಣು ಬಗ್ಗೆ ಎಚ್ಚರದಿಂದರಬೇಕು. ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಎಚ್‌1ಎನ್‌1 ವಿಭಾಗದ ಜಂಟಿ ನಿರ್ದೇಶಕ ಡಾ. ಸಜ್ಜನ್‌ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 51 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದ್ದು, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ತಲಾ 11, ಧಾರವಾಡ, ಮೈಸೂರು, ಹಾಸನದಲ್ಲಿ ತಲಾ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

About the author

ಕನ್ನಡ ಟುಡೆ

Leave a Comment