ರಾಜಕೀಯ

ರಾಜ್ಯದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ನಿಂದಲೇ ಪತನ: ಬಿಜೆಪಿ ನಾಯಕ ಆರ್ ಅಶೋಕ್

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ನಿಂದಲೇ ಪತನಗೊಳಲಿದೆ. ಇದಕ್ಕೆ ಬಿಜೆಪಿ ಪಕ್ಷ ಕಾರಣವಲ್ಲ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದೇಶದೆಲ್ಲೆಡೆ ಇದೆ ಎಂದು ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿಂದು ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರನ್ನು ಅವರ ಪಕ್ಷದವರೇ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿಲ್ಲ,ಪ್ರಧಾನಿ ನರೇಂದ್ರ ಮೋದಿಗೆ ಇವರು ಸಾರಿಸಾಟಿಯಲ್ಲ. ರಾಜ್ಯದ ಎಲ್ಲ ಕಡೆ ಬಿಜೆಪಿಗೆ ಪೂರಕವಾದ ಪರಿಸ್ಥಿತಿ ಇದೆ. ರಾಜ್ಯದ 27 ಕಡೆ ನರೇಂದ್ರ ಮೋದಿಯವರ ಹೆಸರಿನಲ್ಲಿ ಚುನಾವಣೆ ಎದುರಿಸಲಾಗುತ್ತಿದೆ ಎಂದರು. ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಟಕೇಟ್ ನೀಡಿರುವುದು ಹೊಸ ನಾಯಕತ್ವ ಬೆಳಸಬೇಕೆಂಬ ಉದ್ದೇಶದಿಂದ.ಇದು ನಮ್ಮ ನಿರ್ಧಾರವಲ್ಲ ಪಕ್ಷದ ಹೈಕಮಾಂಡ್ ನಿರ್ಧಾರವಾಗಿದೆ. ಅಲ್ಲಿ ಈ ಬಾರಿ ತೇಜಸ್ವಿ ಸೂರ್ಯ ಗೆದ್ದೇ ಗೆಲ್ಲುತ್ತಾರೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.

About the author

ಕನ್ನಡ ಟುಡೆ

Leave a Comment