ರಾಜಕೀಯ

ರಾಜ್ಯಸಭೆ ಚುನಾವಣೆಯಲ್ಲಿ ಬಂಡಾಯ ಶಾಸಕರಿಗೆ ಮತದಾನದ ಅವಕಾಶ ಬೇಡ ಜೆಡಿಎಸ್

ಬೆಂಗಳೂರು: ಪಕ್ಷದಿಂದ ಅಮಾನತುಗೊಂಡಿರುವ 7 ಬಂಡಾಯ ಶಾಸಕರಿಗೆ ಮಾರ್ಚ್ 23 ರಂದು ನಡೆಯುವ ರಾಜ್ಯ ಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಂತೆ ನಿರ್ದೇಶನ ನೀಡಬೇಕು ಎಂದು ಇಬ್ಬರು ಜೆಡಿಎಸ್ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಾರ್ಚ್ 23.2018 ರಂದು ವಿಧಾಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರಿಗೆ ಮತದಾನಕ್ಕೆ ಅವಕಾಶ ನೀಡದಂತೆ ವಿಧಾನಸಭೆ ಸ್ಪೀಕರ್ ಅವರಿಗೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ.

ಜಮೀರ್ ಅಹಮದ್ ಖಾನ್, ಎನ್. ಚೆಲುವರಾಯ ಸ್ವಾಮಿ, ಎಚ್.ಸಿ ಬಾಲಕೃಷ್ಣ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ, ಅಖಂಡ ಶ್ರೀನಿವಾಸ ಮೂರ್ತಿ, ಮತ್ತು ಭೀಮಾ ನಾಯಕ್ ಅವರಿಗೆ ಮತದಾನದ ಅವಕಾಶ ನೀಡಬಾರದೆಂದು ಶ್ರವಣಬೆಳಗೊಳದ ಶಾಸಕ ಸಿ.ಎನ್ ಬಾಲಕೃಷ್ಣ, ಮುದಿಗೆರೆ ಶಾಸಕ ಬಿ.ಬಿ ನಿಂಗಯ್ಯ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಸಂಬಂಧ ಜಸ್ಟೀಸ್ ರಾಘವೇಂದ್ರ ಎಸ್ ಚೌಹಾಣ್ ಮಂಗಳವಾರ ಅರ್ಜಿ ವಿಚಾರಣೆ ನಡೆಸಲಿದ್ದಾರೆ. ಶಾಸಕರ ಸದಸ್ಯತ್ವ ಅನರ್ಹತೆ ಕುರಿತು ಜೆಡಿಎಸ್‌ ಮತ್ತು ಬಂಡಾಯ ಶಾಸಕರ ವಾದ ಮತ್ತು ಪ್ರತಿವಾದ ಸ್ಪೀಕರ್‌ ಕೊಠಡಿಯಲ್ಲಿ ಸುಮಾರು ಒಂದು ಗಂಟೆ ಕಾಲ ನಡೆಯಿತು. ಈ ಸಂಬಂಧ ಸ್ಪೀಕರ್ ಕೋಳಿವಾಡ ಇಂದು ತಮ್ಮ ಆದೇಶ ನೀಡಲಿದ್ದಾರೆ.

 

About the author

ಕನ್ನಡ ಟುಡೆ

Leave a Comment