ರಾಜ್ಯ ಸುದ್ದಿ

ರಾಜ್ಯೋತ್ಸವ 63 ಸಾಧಕರಿಗೆ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಇಂದು ಸಭೆ

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಸಂಬಂಧ ಸಿಎಂ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಲಿದೆ. ರಾಜ್ಯೋತ್ಸವಕ್ಕೆ ಒಂದು ದಿನವಷ್ಟೇ ಬಾಕಿಯಿದೆ. ಆದರೆ ಪ್ರಶಸ್ತಿ ಬಯಸಿ ಬಂದಿರುವ 2 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸುವ ಕಾರ್ಯ ತ್ವರಿತವಾಗಿ ನಡೆದಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈ ಹೊಣೆ ವಹಿಸಲಾಗಿದ್ದರೂ ಸಮರ್ಪಕವಾಗಿ ನಿರ್ವಹಿಸಿಲ್ಲವೆಂಬ ಆರೋಪ ಕೇಳಿಬಂದಿದೆ. ಈ ಬಾರಿ 63 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕಳೆದ ಸರಕಾರದ ಅವಧಿಯಲ್ಲಿ ಆಯ್ಕೆಗಾಗಿ ಸಾಹಿತಿಗಳ ನೆರವು ಪಡೆಯಲಾಗುತ್ತಿತ್ತು. ಸಾಹಿತಿಗಳ ನೇತೃತ್ವದ ಸಮಿತಿ ಪರಿಶೀಲಿಸಿದ ಬಳಿಕ ಸಿಎಂ ಅಧ್ಯಕ್ಷತೆಯಲ್ಲಿ ಸಭೆಯಾಗುತ್ತಿತ್ತು. ಈ ವರ್ಷ ಇಂಥ ಪ್ರಕ್ರಿಯೆ ಕೈಗೊಂಡಿಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಇರುವುದೂ ಈ ಪರಿಸ್ಥಿತಿಗೆ ಒಂದು ಕಾರಣ. ಜತೆಗೆ ಉಪ ಚುನಾವಣೆಯಲ್ಲಿ ಸರಕಾರ ಮುಳುಗಿದ್ದರಿಂದಲೂ ಇಂಥ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ.

About the author

ಕನ್ನಡ ಟುಡೆ

Leave a Comment