ರಾಷ್ಟ್ರ ಸುದ್ದಿ

ರಾಜ್ಯ ವಿಧಾನಸಭೆ, ಲೋಕಸಭೆ ಉಪ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 3 ರಂದು  ಶಿವಮೊಗ್ಗ, ಬಳ್ಳಾರಿ, ಮಂಡ್ಯದ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ  ಉಪಚುನಾವಣೆ ನಡೆಯಲಿದೆ. ಇಂದು ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ  ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ  ಒ. ಪಿ. ರಾಮತ್  ಈ ವಿಷಯ ತಿಳಿಸಿದರು. ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಬಳ್ಳಾರಿಯಲ್ಲಿ ಶ್ರೀರಾಮುಲು ಹಾಗೂ ಮಂಡ್ಯದಲ್ಲಿ ಸಿ. ಎಸ್. ಪುಟ್ಟರಾಜು  ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದಿನಿಂದಲೇ  ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3 ರಂದೇ  ನಡೆಯಲಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಡಿಸೆಂಬರ್ 11 ರಂದು ನಡೆಯಲಿದೆ ಎಂದು ರಾವತ್ ತಿಳಿಸಿದರು. ಎರಡು ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದ ಹಾಗೂ ಜಮಖಂಡಿ ಶಾಸಕ ಸಿದ್ದು ನ್ಯಾಮೇಗೌಡ  ಮೇ ತಿಂಗಳಲ್ಲಿ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಸ್ಥಾನಕ್ಕೆ  ಉಪಚುನಾವಣೆ ನಡೆಯುತ್ತಿದೆ.

About the author

ಕನ್ನಡ ಟುಡೆ

Leave a Comment