ರಾಜ್ಯ ಸುದ್ದಿ

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.2ರಷ್ಟು ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು 2018 ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2ರಷ್ಟು ಏರಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಜುಲೈ 1, 2018ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಶೇ.1.75ರಿಂದ ಶೇ.3.75ಕ್ಕೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಚ್ಚಳವಾಗಲಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಕುಮಾರಸ್ವಾಮಿ ಸರ್ಕಾರ ಸ್ವಲ್ಪ ತಡವಾಗಿ ಹೆಚ್ಚಳ ಮಾಡಿದೆ.

About the author

ಕನ್ನಡ ಟುಡೆ

Leave a Comment