ರಾಷ್ಟ್ರ ಸುದ್ದಿ

ರಾಫೆಲ್ ತನಿಖೆಯಿಂದ ಮೋದಿ ಬಚಾವ್ ಮಾಡಲು ಯಾರಿಗೂ ಸಾಧ್ಯವಿಲ್ಲ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ: 30 ಸಾವಿರ ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಸ್ನೇಹಿತ ಅನಿಲ್ ಅಂಬಾನಿಗೆ ನೀಡಿರುವುದು ಇಡೀ ದೇಶಕ್ಕೆ ಗೊತ್ತಿದ್ದು, ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿಯನ್ನು ಯಾರಿಂದಲೂ ಬಚಾವ್ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಮುಂದುವರೆಯಲು ಸುಪ್ರೀಂಕೋರ್ಟ್ ನೀಡಿರುವ  ಆದೇಶ ಕುರಿತಂತೆ ಸಂಸತ್ ಹೊರಗಡೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ. 

ರಾಫೆಲ್ ಯುದ್ದ ಒಪ್ಪಂದ ಕುರಿತಂತೆ ತನಿಖೆ ಆರಂಭಿಸಿದ್ದರಿಂದ ಅಲೋಕ್ ವರ್ಮಾ ಅವರನ್ನು ರಜೆ ಮೇಲೆ ಕಳುಹಿಸಲಾಗಿತ್ತು. ಈ ಒಪ್ಪಂದದ ತನಿಖೆಯಿಂದ ಪ್ರಧಾನಿ ಮೋದಿ ಹಾಗೂ ಸರ್ಕಾರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ತನಿಖೆ ಆರಂಭಿಸಿದ್ದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನು ವಜಾಗೊಳಿಸಲಾಗಿತ್ತು.

ಅಲೋಕ್ ವರ್ಮಾ ಅವರೇ ಸಿಬಿಐ ನಿರ್ದೇಶಕರಾಗಿ ಮುಂದುವರೆಯಲು ಸುಪ್ರೀಂಕೋರ್ಟ್ ಅವಕಾಶ ನೀಡಿರುವುದರಿಂದ ನಮ್ಮಗೆ ಸ್ವಲ್ಪ ನೆಮ್ಮದಿ ಸಿಕ್ಕಂತಾಗಿದೆ. ಮುಂದೆ ಏನಾಗುತ್ತದೆ ಎಂಬುದನ್ನು ಕಾಯ್ದು ನೋಡಿ ಎಂದು ತಿಳಿಸಿದರು. ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧದ ಚರ್ಚೆಯಿಂದ ಮೋದಿ ಓಡಿಹೋಗಬಹುದು. ಆದರೆ, ಅವರು ಸುಲಭವಾಗಿ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಜನತಾ ನ್ಯಾಯಾಲಯದ ಎದುರು ಈ ವಿವಾದ ಸಂಬಂಧ ನಮ್ಮೊಂದಿಗೆ ಅವರು ಚರ್ಚೆ ನಡೆಸಬೇಕಾಗಿದೆ. ರಾಫೆಲ್ ಹಗರಣ ನಡೆದಿರುವುದು ಸತ್ಯವಾಗಿದ್ದು, ಸತ್ಯದಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment