ರಾಜಕೀಯ

ರಾಫೇಲ್ ಹಗರಣದಲ್ಲಿ ಪ್ರಧಾನಿ ಮೋದಿ ನೇರ ಭಾಗಿಯಾಗಿದ್ದಾರೆ: ಕಾಂಗ್ರೆಸ್

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಫೇಲ್ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಜೊತೆಗೆ  ಕರ್ನಾಟಕದ ಸಮ್ಮಿಶ್ರ ಸರ್ಕಾರವನ್ನು ಅಸ್ಛಿರಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನರೇಂದ್ರ ಮೋದಿ ರಾಫೇಲ್ ಹಗರಣದಲ್ಲಿ ಭಾಗಿಯಾಗಿದ್ದಾರೆ, ಹಿಗಾಗಿ ಅವರು ಕಾಂಗ್ರೆಸ್  ಪ್ರಶ್ನೆಗಳಿಗೆ ಉತ್ತರಿಸುವ ಸ್ಥಿತಿಯಲ್ಲಿಲ್ಲ ಎಂದು  ಆರೋಪಿಸಿದ್ದಾರೆ.
2019 ರ ನಂತರ ಮೋದಿ ಅಧಿಕಾರ ಕಳೆದುಕೊಳ್ಳಲಿದ್ದಾರೆ, ಕಾಂಗ್ರೆಸ್ ಮತ್ತು ಜೆಡಿಎಸ್ 28 ಸೀಟುಗಳನ್ನು  ಗೆಲ್ಲಲಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಈ ದೇಶಕ್ಕೇನು ನೀಡಿದೆ ಎಂಬ ಸಂದೇಶವನ್ನು ಮನೆ ಮನೆಗೆ ತಲುಪಿಸಲಾಗುವುದು. ಕೇಂದ್ರ ಸರಕಾರದ ವೈಫಲ್ಯ ತಿಳಿಸಲಾಗುವುದು. ಅಂಬಾನಿ, ಅದಾನಿಗಳು ಪ್ರಧಾನಿ ಕಚೇರಿ ಪ್ರವೇಶಿಸಿದ್ದಾರೆ. ಹಾಗಾಗಿ ಇಂಥ ಸರಕಾರ ಕಿತ್ತೊಗೆಯಲು ಸಂಕಲ್ಪ ಮಾಡಬೇಕಿದೆ ಎಂದು ಎಚ್,ಕೆ ಪಾಟೀಲ್ ಹೇಳಿದ್ದಾರೆ,
ಉದ್ಯೋಗ ಸೃಷ್ಟಿ ಮಾಡದೆ ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲು ಕೊಟ್ಟೇನು ಪ್ರಯೋಜನ? ಇದೇ ಬಿಜೆಪಿಯವರು ಈ ಹಿಂದೆ ಮಂಡಲ್‌ ಆಯೋಗದ ವರದಿ ಜಾರಿಗೆ ವಿರೋಧಿಸಿದರು ದು ಆರೋಪಿಸಿದರು. ಚೌಕೀದಾರನ ಕಾಲದಲ್ಲಿ ರಕ್ಷಣಾ ಇಲಾಖೆಯಲ್ಲಿ 40 ಸಾವಿರ ಕೋಟಿ ರೂ. ಹಗರಣವಾಗಿದೆ. ಮೋದಿಯಷ್ಟು ಸುಳ್ಳು ಹೇಳುವ, ನಾಟಕವಾಡುವ ರಾಜಕಾರಣಿಯನ್ನು ನಾನು ನೋಡಿಯೇ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಪ್ರಧಾನಿ ನಿವಾಸದಲ್ಲಿ ಜನವರಿ 16 ರಂದು ನಡೆದ ಸಭೆಯ ವೇಳೆ ರಾಜ್ಯದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಯತ್ನದ ಬಗ್ಗೆ ಗಮನಕ್ಕೆ ತಂದಿದ್ದೇನೆ. ಆಗ ಪ್ರಧಾನಿಯವರು ಜನರ ಆಶಯ ಈಡೇರಿಸಲು ಶ್ರಮಿಸಲಾಗುತ್ತಿದೆ ಎಂದು ಪ್ರತಿ ಉತ್ತರ ನೀಡಿರುವುದು ಸರಕಾರ ಬೀಳಿಸುವ ಪ್ರಯತ್ನ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

About the author

ಕನ್ನಡ ಟುಡೆ

Leave a Comment