ರಾಜಕೀಯ

ರಾಮಕೃಷ್ಣ ಮಠಕ್ಕೆ ಭೇಟಿ ನೀಡಿದ ನಳಿನ್ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಮಂಗಳಾದೇವಿ ಶ್ರೀ ರಾಮಕೃಷ್ಣ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಶಾಸಕ ಯೋಗೀಶ್ ಭಟ್ , ಮೋನಪ್ಪ ಭಂಡಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಭಾಸ್ಕರ್ ಚಂದ್ರ ಶೆಟ್ಟಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

ಅಸೈಗೊಳಿಯಲ್ಲಿ ನಳಿನ್ ಶಕ್ತಿ ಪ್ರದರ್ಶನ

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಣಾಜೆ ಶಕ್ತಿ ಕೇಂದ್ರ ಅಸೈಗೊಳಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಮಾಜೀ ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಬದ್ರಿನಾಥ್ ಕಾಮತ್, ರವೀಂದ್ರ ಶೆಟ್ಟಿ ಉಳಿದೋಟ್ಟು, ಚಂದ್ರಹಾಸ ಉಳ್ಳಾಲ್, ಸತೀಶ್ ಕುಂಪಲ, ಧನಲಕ್ಷ್ಮೀ ಘಟ್ಟಿ, ಜಯರಾಮ್ ಶೆಟ್ಟಿ, ಸೀತಾರಾಮ್ ಶೆಟ್ಟಿ, ಮೋಹನ್ ರಾಜ್ ಕೋಟೆಕಾರ್ ಇನ್ನಿತರ ನಾಯಕರು ಹಾಗೂ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

About the author

ಕನ್ನಡ ಟುಡೆ

Leave a Comment