ರಾಜ್ಯ ಸುದ್ದಿ

ರಾಯಚೂರು: ಚಲಿಸುತ್ತಿದ್ದ ರೈಲಿನಲ್ಲಿ ಅಪರಿಚಿತ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ರಾಯಚೂರು: ಚಲಿಸುತ್ತಿದ್ದ ರೈಲಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಯಚೂರು ರೈಲು ನಿಲ್ದಾಣದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ರೈಲಿನ ಬೋಗಿಯ ಫ್ಯಾನಿಗೆ ಟವಲ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗುಂತಕಲ್ – ರಾಯಚೂರು ಪ್ಯಾಸೆಂಜರ್ ರೈಲಿನ ಬೋಗಿಯ ಫ್ಯಾನಿಗೆ ಟವಲ್ ಕಟ್ಟಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ಸಂಜೆ ಗುಂತಕಲ್‌ನಿಂದ ರೈಲು ರಾಯಚೂರಿಗೆ ಬಂದಿದೆ. ಬೋಗಿಯಲ್ಲಿ ಯಾರು ಇಲ್ಲದ ವೇಳೆ ಆತ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಪ್ಲಾಟ್ಫಾರಂನಲ್ಲಿ ರೈಲು ನಿಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ. ಮೃತ ವ್ಯಕ್ತಿ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ ಎನ್ನಲಾಗಿದ್ದು, ಆತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment