ರಾಜಕೀಯ ರಾಜ್ಯ

ರಾಹುಲ್​ ಗಾಂಧಿ ಒಬ್ಬ ತಲೆ ತಿರುಕ : ಬಿ.ಎಸ್​ ಯಡಿಯೂರಪ್ಪ

 ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಒಬ್ಬ ತಲೆ ತಿರುಕ. ಟೀಕೆ ಮಾಡುವ ಮುನ್ನ ತಮ್ಮ ಸುತ್ತ ಯಾರಿದ್ದಾರೆಂದು ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರು ರಾಹುಲ್​ ಟ್ವೀಟ್​ಗೆ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ರಾಜ್ಯವನ್ನು ಹಾಳು ಮಾಡಿದಂಥ ಭ್ರಷ್ಟ ಸಿಎಂ ಅನ್ನು ರಾಹುಲ್​ ಪಕ್ಕದಲ್ಲಿ ಇಟ್ಟುಕೊಂಡಿದ್ದಾರೆ. ಇಂತಹವರಿಗೆ ರಾಜ್ಯದ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಬುಧವಾರ ರಾತ್ರಿ ಟ್ವೀಟ್​ ಮಾಡಿದ್ದ ರಾಹುಲ್​ ಗಾಂಧಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್​. ಯಡಿಯೂರಪ್ಪ ಮತ್ತು ರೆಡ್ಡಿ ಸಹೋದರರು ಕರ್ನಾಟಕವನ್ನು ಲೂಟಿ ಮಾಡಿದ್ದರು. ನಮ್ಮ ಸರ್ಕಾರ ಅವರಿಗೆ ತಕ್ಕ ಪಾಠ ಕಲಿಸಿತ್ತು. ಆದರೆ, ಈಗ ಪ್ರಧಾನಿ ಮೋದಿ ಅವರು ಗಣಿ ಲೂಟಿಯಲ್ಲಿ ಭಾಗಿಯಾಗಿರುವ 8 ಜನರನ್ನು ಜೈಲಿನಿಂದ ಹೊರತಂದು ವಿಧಾನಸೌಧಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.

About the author

ಕನ್ನಡ ಟುಡೆ

Leave a Comment