ರಾಜಕೀಯ

ರಾಹುಲ್ ಗಾಂಧಿಗೆ ನೈತಿಕತೆ ಇದ್ದರೆ ದಿನೇಶ್ ಗುಂಡೂರಾವ್ ವಿರುದ್ಧ ಕ್ರಮ ಜರುಗಿಸಲಿ: ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವ ಪುಟ್ಟರಂಗ ಶೆಟ್ಟಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದರು,
ವಿಧಾನಸೌಧದಲ್ಲಿರುವ ಕಚೇರಿಯಿಂದ ಪುಟ್ಟರಂಗಶೆಟ್ಟಿ ಅವರ ಆಪ್ತ ಸಿಬ್ಬಂದಿ 25.76 ಲಕ್ಷ ಹಣ ಸಾಗಿಸುವ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ, ಇದು ಭ್ರಷ್ಟಾಚಾರಕ್ಕೆ ಹಿಡಿದ ಕೈ ಗನ್ನಡಿಯಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ, ಸಚಿವ ಡಿ.ಕೆ ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪುಟ್ಟರಂಗ ಶೆಟ್ಟಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ,  ಬಿಜೆಪಿ ಸುಖಾ ಸುಮ್ಮನೆ ಪುಟ್ಟರಂಗ ಶೆಟ್ಟಿ ಅವರ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ,
ಕಾಂಗ್ರೆಸ್ ಸಚಿವರ ಆರೋಪಗಳಿಗೆ ಪ್ರತಿಕ್ರಿಸಿರುವ  ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ , ಪುಟ್ಟರೇಂಗ ಶೆಟ್ಟಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಸಿಸಿಬಿಯಿಂದ ಪ್ರಕರಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೈತಿಕತೆ ಇದ್ದರೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು  ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಎನ್ ರವಿ ಕುಮಾರ್ ಆಗ್ರಹಿಸಿದ್ದಾರೆ.

About the author

ಕನ್ನಡ ಟುಡೆ

Leave a Comment