ರಾಷ್ಟ್ರ

ರಾಹುಲ್ ಗಾಂಧಿಯೇ ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ರು: ಕರ್ತಾರ್ ಪುರ್ ಭೇಟಿಗೆ ಸಿಧು ಸ್ಪಷ್ಟನೆ

ಅಮೃತಸರ್: ಇತ್ತೀಚೆಗೆ ನಡೆದ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲು ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ತೆರಳಿದ್ದರ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಆದೇಶವೇ ಕಾರಣವೆನ್ನುವುದು ಈಗ ಬಹಿರಂಗವಾಗಿದೆ. ಸಿಧು ಸ್ವತಃ ಈ ಕುರಿತು ಹೇಳಿಕೆ ನೀಡಿದ್ದು “ರಾಹುಲ್ ಗಾಂಧಿ ನನ್ನನ್ನು ಕರ್ತಾರ್ ಪುರ ಕಾರಿಡಾರ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಾಕ್ ಗೆ ತೆರಳುವಂತೆ ಹೇಳಿದ್ದರು” ಎಂದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೆ ಸಿಧು ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದ್ದು ಈ ಸಂಬಂಧ ಅವರು ಸಿಧು ಪಾಕ್ ಭೇಟಿಯನ್ನು ಮಾನ್ಯ ಮಾಡಲು ನಿರಾಕರಿಸಿದ್ದರು.ಅಮೃತಸರ್ ನಲ್ಲಿ ನಡೆದ ಧಾರ್ಮಿಕ ಸಭೆ ಮೇಲೆ ಪಾಕ್ ಐಎಸ್ ಐ ಪ್ರಚೋದಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ದಾಳಿಉಯಲ್ಲಿ ಮೂವರು ಸಾವನ್ನಪ್ಪಿದ್ದರು. ಹೀಗಾಗಿ ತಮ್ಮ ಸಂಪುಟ ಸಹೋದ್ಯೋಗಿಯಾಗಿರುವ ಸಿಧು ಪಾಕ್ ಭೇಟಿಯನ್ನು ತಡೆಯಲು ಅವರು ಪ್ರಯತ್ನಿಸಿದ್ದರು.”ರಾಹುಲ್ ಗಾಂಧಿ ನನ್ನ ನಾಯಕ. ಅವರೇ ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು” ಸಿಧು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಅಲ್ಲದೆ ಸಿಧು ಪಾಕ್ ಭೇಟಿಯನ್ನು 50-100 ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾಗಿ ಸಹ ಅವರು ಹೇಳಿಕೊಂಡಿದ್ದಾರೆ.
ಇಷ್ಟಾಗಿ ಸಿಧು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತನಗೆ ತಂದೆ ಸಮಾನ ಎಂದು ಹೇಳಿಕೆ ನಿಡಿದ್ದಾರೆ.

About the author

ಕನ್ನಡ ಟುಡೆ

Leave a Comment