ಸಿನಿ ಸಮಾಚಾರ

ರಾಹುಲ್ ಗಾಂಧಿ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದೇನೆ: ನಟಿ ಊರ್ಮಿಳಾ ಮಾತೋಂಡ್ಕರ್

ನವದೆಹಲಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಾನು ಕಾಂಗ್ರೆಸ್ ಮೇಲೆ ಹಾಗೂ ರಾಹುಲ್ ಗಾಂಧಿ ಅವರ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದೇನೆ, ರಾಹುಲ್ ಗಾಂಧಿ ತಮ್ಮ ಜೊತೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಲಿದ್ದಾರೆ. ಜವಹರ್ ಲಾಲ್ ನೆಹರು ಮತ್ತು, ಸರ್ದಾರ್ ಪಟೇಲ್ ಹಾಗೂ ಮಹಾತ್ಮ ಗಾಂಧಿ ಅವರು ಬೋಧಿಸಿದ ತತ್ವಗಳಿಂದ ನಾನು ಸ್ಪೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಮುಂಬಯಿ ಉತ್ತರ ಲೋಕಸಭೆ ಕ್ಷೇತ್ರದಿಂದ ಊರ್ಮಿಳಾ ಸ್ಪರ್ಧಿಸುವ ಸಾಧ್ಯತೆಯಿದೆ.

About the author

ಕನ್ನಡ ಟುಡೆ

Leave a Comment