ರಾಷ್ಟ್ರ ಸುದ್ದಿ

ರಿಷಿ ಕುಮಾರ್ ಶುಕ್ಲಾ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ ಬೆನ್ನಲ್ಲೇ ದೀದಿ ಜೊತೆ ಸಂಘರ್ಷ

ಕೋಲ್ಕತ್ತಾ: ನೂತನ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರ ರಿಷಿ ಕುಮಾರ್ ಶುಕ್ಲಾ ಅವರನ್ನು ನೇಮಕ ಮಾಡಿದ್ದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಶುಕ್ಲಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ಸಂಘರ್ಷ ಎದುರಾಗಿದೆ.
ಶಾರದಾ ಚಿಟ್ ಫಂಡ್ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು ತೆರಳಿದ್ದ ಸಂದರ್ಭದಲ್ಲಿ ಸಿಬಿಐ ಅಧಿಕಾರಿಗಳನ್ನೇ ಕೊಲ್ಕತ್ತಾ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದರು. ಸದ್ಯ ಪಶ್ಚಿಮ ಬಂಗಾಳದಲ್ಲಿ ಸಿಬಿಐ ವರ್ಸಸ್ ಕೋಲ್ಕತ್ತಾ ಪೊಲೀಸರು ಎಂದಾಗಿದ್ದು ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಳೆದ ರಾತ್ರಿಯಿಂದ ಧರಣಿ ನಡೆಸುತ್ತಿದ್ದಾರೆ. ಸಿಬಿಐ ಅಧಿಕಾರಿಗಳನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದ ಕ್ರಮದ ಕುರಿತು ಸಿಬಿಐ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದು ವಿಚಾರಣೆ ನಡೆಸುತ್ತಿದೆ. ಇನ್ನು ಸಿಬಿಐನ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಶುಕ್ಲಾ ಅವರು ಮಮತಾ ಬ್ಯಾನರ್ಜಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

About the author

ಕನ್ನಡ ಟುಡೆ

Leave a Comment