ರಾಷ್ಟ್ರ

ರೈತರಿಗೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲ

ಪಾಟ್ನ: ಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಹಾಗೂ ರೈತರಿಗೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಭಾನುವಾರ ಹೇಳಿದ್ದಾರೆ. ಬಿಹಾರ ರಾಜ್ಯದ ಖಗಾಡಿಯಾದಲ್ಲಿ ನಡೆದ ರೈತರ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರವನ್ನು ಟೀಕಿಸಿದ್ದಾರೆ.

ಲೋಕಪಾಲ್ ಮಸೂದೆ ಜಾರಿ ಹಾಗೂ ರೈತರ ಪರವಾಗಿ ಕುರಿತ ನನ್ನ ಹೋರಾಟವನ್ನು ಮುಂದುವರೆಸುತ್ತೇನೆ. ರೈತರು ಇಂದು ಎದುರಿಸುತ್ತಿರುವ ಸಮಸ್ಯೆಗಳನ್ನು ಹಿಡಿದು ರಾಜಧಾನಿ ದೆಹಲಿಯಲ್ಲಿ ಮಾ.23ರಿಂದ ಸತ್ಯಾಗ್ರಹ ನಡೆಸುತ್ತೇನೆ. ಕಳೆದ ಮೂರು ವರ್ಷಗಳಿಂದ ಈ ವಿಚಾರಗಳ ಕುರಿತಂತೆ ನಾನು ಮೌನವಾಗಿದ್ದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆ ನಡೆಸಲು ಪ್ರಯತ್ನ ನಡೆಸುತ್ತಲೇ ಇದ್ದೇನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಪ್ರಧಾನಿ ಮೋದಿಯವರಿಗೆ ಈವರೆಗೂ 21 ಪತ್ರಗಳನ್ನು ಬರೆದಿದ್ದೇನೆ. ಆದರೆ ಯಾವುದಕ್ಕೂ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ಹೇಳಿದ್ದಾರೆ.

 

 

 

 

About the author

ಕನ್ನಡ ಟುಡೆ

Leave a Comment