ರಾಜಕೀಯ

ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಿಎಂ ಕುಮಾರಸ್ವಾಮಿಗೆ ಇಷ್ಟವಿಲ್ಲ: ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುವ ಮನಸ್ಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ  ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಮಾತನಾಡಿದ ಅವರು, ರೈತರ ಸಮಸ್ಯೆಗಳ ಸಂಬಂಧ ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಸಿಎಂ ಉತ್ತರ ನೀಡುತ್ತಿಲ್ಲ ಎಂದು ದೂರಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರ ಸಾಲಮನ್ನಾ ವಿಷಯವನ್ನು ನಾನು ಪ್ರಸ್ತಾಪಿಸಿದರೇ ರಾಜ್ಯ ಸರ್ಕಾರ ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ,
ಸರಿಯಾಗಿ ಉತ್ತರ ನೀಡದ ಕುಮಾರ ಸ್ವಾಮಿ ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆಪಾದಿಸಿದ್ದಾರೆ. ಈ ಸಂಬಂಧ ಕ್ಷಮೆ ಸಿಎಂ ಕ್ಷಮೆ ಕೇಳಬೇಕೆಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿರುವುದಾಗಿ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment