ಕ್ರೀಡೆ

ರೋಹಿತ್ ಶರ್ಮಾ ದಂಪತಿಗೆ ಹೆಣ್ಣು ಮಗು ಜನನ

ನವದೆಹಲಿ: ಕ್ರಿಕೆಟಿಗ ರೋಹಿತ್‌ ಶರ್ಮಾ ಪತ್ನಿ ರಿತಿಕಾ ಸಜ್ದೆ ಅವರು ಮೊದಲ ಹೆಣ್ಣು ಮಗುವಿಗೆ ಡಿ. 30ರಂದು ಜನ್ಮ ನೀಡಿದ್ದು, ಕ್ರಿಕೆಟ್​ ಲೋಕ ಹಾಗೂ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ನಿನ್ನೆಯಷ್ಟೇ ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಅವರು ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. ಈ ಕುರಿತು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದ್ದು, ದಂಪತಿಗೆ ಶುಭ ಕೋರಿದೆ.

ಸದ್ಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುತ್ತಿದ್ದ ರೋಹಿತ್ ಶರ್ಮಾ ಪತ್ನಿ ಮತ್ತು ಮಗುವನ್ನು ನೋಡಲು ಆಸ್ಟ್ರೇಲಿಯಾದಿಂದ ಮುಂಬೈಗೆ ಆಗಮಿಸುತ್ತಿದ್ದು, ಇದೇ ಜನವರಿ 3ರಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ನಾಲ್ಕನೇ ಹಾಗೂ ಕೊನೆ ಟೆಸ್ಟ್‌ ಪಂದ್ಯದಲ್ಲಿ ಗೈರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಜ. 12ರಿಂದ ಶುರುವಾಗಲಿರುವ ಸೀಮಿತ ಓವರ್‌ಗಳ ಸರಣಿಯಲ್ಲಿ ಪಾಲ್ಗೊಳ್ಳಲಿದ್ದು, ಅದಕ್ಕೂ ಮುನ್ನ ಜ. 8 ರಂದು ಏಕದಿನ ತಂಡವನ್ನು ಸೇರಿಕೊಳ್ಳಲಿದ್ದಾರೆ.

About the author

ಕನ್ನಡ ಟುಡೆ

Leave a Comment