ರಾಜ್ಯ ಸುದ್ದಿ

ಲಕ್ಷ್ಮೀ ಹೆಬ್ಬಾಳ್ಕರ್ ಒಬ್ಬ ಅದ್ಭುತ ಕಲಾವಿದೆ: ಮಾಜಿ ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಬ್ಬ ಅದ್ಭುತ ಕಲಾವಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಸೋಮವಾರ ವ್ಯಂಗ್ಯವಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ನಾವು ಹೇಳುವುದು ಸೂಕ್ತವಲ್ಲ. ಜಾರಕಿಹೊಳಿ ಬ್ರದರ್ಸ್ ಚೆನ್ನಾಗಿಯೇ ಹೇಳಿದ್ದಾರೆ ಎಂದರು.

ಅವರ ಬಗ್ಗೆ ನಾನು ಹೇಳೋದಕ್ಕಿಂತ ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಜಾರಕಿಹೊಳಿ ಸಹೋದರರೇ ಸಮರ್ಥರು, ಅವರನ್ನೇ ಕೇಳಿ ಎಂದು ಹೇಳಿದರು. ಆಡಳಿತಾರೂಢ ರಾಜ್ಯ ಸರ್ಕಾರ ಯಾವ ಅಭಿವೃದ್ಧಿ ಕಾರ್ಯವೂ ಆಗುತ್ತಿಲ್ಲ. ಇದು ರೇವಣ್ಣ, ಸಿದ್ದರಾಮಯ್ಯ, ಡಿಕೆಶಿ ಅವರ ರಕ್ಷಣೆಯ ಸರ್ಕಾರವಾಗಿದೆ ಎಂದು ಆರೋಪಿಸಿದರು.

 

About the author

ಕನ್ನಡ ಟುಡೆ

Leave a Comment