ರಾಷ್ಟ್ರ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಕಷ್ಟ: ಎಬಿಪಿ ಸಿವೋಟರ್ ಸಮೀಕ್ಷೆ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಎಬಿಪಿ- ಸಿ ವೋಟರ್ ನಡೆಸಿದ ಸಮೀಕ್ಷೆ ವರದಿಯಲ್ಲಿ  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ  ಮತ್ತೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.
ಎನ್ ಡಿಎ ಮೈತ್ರಿಕೂಟ ಕೇವಲ 233 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಮೈತ್ರಿಕೂಟವಾಗಲಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ 167 ಮತ್ತು  ಇತರ ಪಕ್ಷಗಳು 143 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಸಮೀಕ್ಷೆ ಹೇಳಿದೆ. ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 51 ಸ್ಥಾನಗಳಲ್ಲಿ  ಎಸ್ಪಿ- ಬಿಎಸ್ಪಿ ಹಾಗೂ ಆರ್ ಎಲ್ ಡಿ ಮೈತ್ರಿಕೂಟ, 25 ಸ್ಥಾನಗಳಲ್ಲಿ ಬಿಜೆಪಿ, ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್  ಜಯಗಳಿಸಲಿವೆ. ಪಂಜಾಬಿನಲ್ಲಿ 13 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಯುಪಿಎ  ಭರ್ಜರಿ ಗೆಲುವು ಸಾಧಿಸಲಿದೆ. ದೆಹಲಿ, ಹಿಮಾಚಲ ಪ್ರದೇಶ , ಉತ್ತರ ಖಂಡ್,  ಹರಿಯಾಣ ಹಾಗೂ ಬಿಹಾರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ವರದಿಯಲ್ಲಿ ಹೇಳಲಾಗಿದೆ.

ಇನ್ನೂ  ರಾಜಸ್ತಾನದಲ್ಲಿ ಬಿಜೆಪಿ 18, ಕಾಂಗ್ರೆಸ್ 7,  ಮಧ್ಯಪ್ರದೇಶದಲ್ಲಿ ಬಿಜೆಪಿ 23, ಕಾಂಗ್ರೆಸ್ 6, ಗುಜರಾತ್ ನಲ್ಲಿ ಬಿಜೆಪಿ 24, ಕಾಂಗ್ರೆಸ್ 2,  ಮಹಾರಾಷ್ಟ್ರದಲ್ಲಿ ಎನ್ ಡಿಎ 16, ಯುಪಿಎ 28,  ಇತರರು 4, ಗೋವಾದಲ್ಲಿ ಬಿಜೆಪಿ, ಕಾಂಗ್ರೆಸ್ ತಲಾ 1 , ಜಾರ್ಖಂಡ್ ನಲ್ಲಿ ಎನ್ ಡಿಎ 5, ಯುಪಿಎ 8, ಇತರರು 1, ಒಡಿಶಾದಲ್ಲಿ ಎನ್ ಡಿಎ 12, ಇತರರು , ಛತ್ತೀಸ್ ಗಢದಲ್ಲಿ ಬಿಜೆಪಿ 5, ಕಾಂಗ್ರೆಸ್ 6, ಪಶ್ಚಿಮ ಬಂಗಾಳದಲ್ಲಿ ಎನ್ ಡಿಎ7, ಯುಪಿಎ1, ಟಿಎಂಸಿ 34 , ಅಸ್ಸಾಂನಲ್ಲಿ ಎನ್ ಡಿಎ 6, ಯುಪಿಎ 7,  ಮತ್ತು ಇತರರು 1 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. 

ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಸಿ:  ವೋಟರ್ ಸಮೀಕ್ಷೆಯಂತೆ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎನ್ನಲಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿ ಈ ಬಾರಿ 14 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 11 ಹಾಗೂ ಜೆಡಿಎಸ್ 3 ಸ್ಥಾನಗಳಲ್ಲಿ ಜಯಗಳಿಸಲಿವೆ ಎಂಬುದು ಸಮೀಕ್ಷಾ ವರದಿಯಿಂದ ತಿಳಿದುಬಂದಿದೆ.

About the author

ಕನ್ನಡ ಟುಡೆ

Leave a Comment