ರಾಜ್ಯ ಸುದ್ದಿ

ಲೋಕಸಭೆ ಎಲೆಕ್ಷನ್‌ಗೂ ದೋಸ್ತಿ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಹರಪನಹಳ್ಳಿ ರಾಜ್ಯದ ಉಪಚುನಾವಣೆ ಮೈತ್ರಿ ಮುಂಬರುವ ಲೋಕಸಭಾ ಚುನಾವಣೆಗೂ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು. ಪಟ್ಟಣದ ಕೆಪಿಸಿಸಿ ಪ್ರ.ಕಾರ್ಯದರ್ಶಿ ಸಿ.ಚಂದ್ರಶೇಖರ್‌ ಭಟ್‌ರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಕಾಂಗ್ರೆಸ್‌ ಸೀಟು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಲಿದೆ ಎಂದರು. ಬಳ್ಳಾರಿ, ಜಮಖಂಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಗಳಿಸಲಿದ್ದು ಮಂಡ್ಯ ಹಾಗೂ ರಾಮನಗರಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಲಿದೆ. ಬಿಜೆಪಿಗೆ ಸೋಲಾಗಲಿದೆ. ಉಪಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು. ಲಿಂಗಾಯತ ಧರ್ಮದ ಕುರಿತ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್‌ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪನವರ ಹೇಳಿಕೆಗಳು ವೈಯಕ್ತಿಕ ಅಭಿಪ್ರಾಯಗಳೇ ಹೊರತು ಪಕ್ಷ ದ ಅಭಿಪ್ರಾಯವಲ್ಲ. ಕಂದಾಯ ಉಪವಿಭಾಗವನ್ನು ಹರಪನಹಳ್ಳಿಯಲ್ಲೆ ಉಳಿಸಲು ಕಂದಾಯ ಸಚಿವರ ಬಳಿ ಚರ್ಚಿಸುವೆ ಎಂದರು.

About the author

ಕನ್ನಡ ಟುಡೆ

Leave a Comment