ರಾಷ್ಟ್ರ ಸುದ್ದಿ

ಲೋಕಸಭೆ ಚುನಾವಣೆಯೊಂದಿಗೇ ಕಾಶ್ಮೀರ ಚುನಾವಣೆ ನಡೆಯಬೇಕು: ಬಿಜೆಪಿ

ಶ್ರೀನಗರ: ಪಿಡಿಪಿ-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಬೆನ್ನಲ್ಲೇ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಕಾಶ್ಮೀರ ವಿಧಾನಸಭೆ ವಿಸರ್ಜಿಸಿದ್ದು, ಇದೀಗ ಲೋಕಸಭೆ ಚುನಾವಣೆಯೊಂದಿಗೇ ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರು, ಈಗಾಗಲೇ ರಾಜ್ಯಪಾಲ ಸತ್ಯಪಾಲ್ ಸಿಂಗ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆಗೆ ನಾವು ಸಿದ್ಧರಾಗಬೇಕಿದೆ. ಹೀಗಾಗಿ ನಮ್ಮ ಶಾಸಕರ ಸಭೆ ಕರೆದಿದ್ದು, ಚುನಾವಣೆ ಸಂಬಂಧ ಚರ್ಚೆ ನಡೆಸಲಾಗುತ್ತದೆ. ಅಂತೆಯೇ ಮುಂಬರುವ ಲೋಕಸಭಾ ಚುನಾವಣೆಯೊಂದಿಗೇ ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯಬೇಕು ಎಂದು ಹೇಳಿದರು.ನಿನ್ನೆಯಷ್ಟೇ ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಮೈತ್ರಿ ಯೋಜನೆ ಮೂಲಕ ಸರ್ಕಾರ ರಚನೆಗೆ ರಾಜ್ಯಪಾಲ ಸತ್ಯಪಾಲ್ ಸಿಂಗ್ ಅವರ ಬಳಿ ಹಕ್ಕು ಮಂಡನೆಗೆ ಮುಂದಾಗಿದ್ದವು. ಇದರ ಬೆನ್ನಲ್ಲೇ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ವಿಧಾನಸಭೆಯನ್ನೇ ವಿಸರ್ಜಿಸುವ ಮೂಲಕ ಶಾಕ್ ನೀಡಿದ್ದರು. ಇದೀಗ ಪಿಡಿಪಿ ಮತ್ತು ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿ ಚುನಾವಣೆಗೆ ಎದುರು ನೋಡಬೇಕಿದೆ.

About the author

ಕನ್ನಡ ಟುಡೆ

Leave a Comment